News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದೇಶದ ಹೈಕೋರ್ಟ್‌ಗಳಲ್ಲಿ 60 ಲಕ್ಷ ಪ್ರಕರಣಗಳು ಬಾಕಿ ಇವೆ: ಕೇಂದ್ರ

ನವದೆಹಲಿ: ಫೆ.1 ರವರೆಗೆ ಸುಪ್ರೀಂ ಕೋರ್ಟ್‌ನಲ್ಲಿ 69,000 ಹೆಚ್ಚು ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಉಳಿದಿವೆ, ಹೈಕೋರ್ಟ್‌ಗಳಲ್ಲಿ ಸುಮಾರು 60 ಲಕ್ಷ ಪ್ರಕರಣಗಳು ಬಾಕಿ ಇದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಇದು ಭಾರತದ ಸುಪ್ರೀಂಕೋರ್ಟ್ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಒದಗಿಸಿದ ಮಾಹಿತಿಯಲ್ಲಿ ಈ ಅಂಕಿಅಂಶಗಳು ಲಭ್ಯವಿದೆ.

ಗುರುವಾರ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು, ರಾಷ್ಟ್ರೀಯ ನ್ಯಾಯಾಂಗ ದತ್ತಾಂಶ ಗ್ರಿಡ್‌ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ ದೇಶಾದ್ಯಂತ ಹೈಕೋರ್ಟ್‌ಗಳಲ್ಲಿ ಸುಮಾರು 60 ಲಕ್ಷ ಪ್ರಕರಣಗಳು ಬಾಕಿ ಉಳಿದಿವೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಪ್ರಕರಣಗಳ ವಿಲೇವಾರಿ ಸಂಪೂರ್ಣವಾಗಿ ನ್ಯಾಯಾಂಗದ ವ್ಯಾಪ್ತಿಯಲ್ಲಿದೆ ಎಂದು  ಹೇಳಿದರು.

ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ನೇರ ಪಾತ್ರವಿಲ್ಲ ಎಂದು ಅವರು ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top