ನವದೆಹಲಿ: ಭೂಕಂಪದ ಭೀಕರತೆಗೆ ಜರ್ಜರಿತಗೊಂಡಿರುವ ಟರ್ಕಿಯಲ್ಲಿ ಭಾರತೀಯ ಸೇನೆಯ ತಂಡಗಳು ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿವೆ. ಈ ರೀತಿಯಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ ಭಾರತದ ಮಹಿಳಾ ಸೈನಿಕರೊಬ್ಬರಿಗೆ ಟರ್ಕಿ ಮಹಿಳೆ ಮುತ್ತಿಕ್ಕುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಭಾರತೀಯ ಸೇನೆಯ ಎಡಿಜಿಪಿಐ ಅಧಿಕೃತ ಟ್ವಿಟರ್ ಹ್ಯಾಂಡಲ್ ನಲ್ಲಿ ಈ ಫೋಟೋವನ್ನು ಹಂಚಲಾಗಿದ್ದು, ‘ವಿ ಕೇರ್’ ಎಂದು ಒಕ್ಕಣೆ ಬರೆಯಲಾಗಿದೆ.
ಟರ್ಕಿಯಲ್ಲಿ ಭಾರತೀಯ ಸೇನೆ ನಡೆಸುತ್ತಿರುವ ಪರಿಹಾರ ಕಾರ್ಯಗಳಿಗೆ ಭಾರಿ ಪ್ರಶಂಸೆಗಳು ವ್ಯಕ್ತವಾಗಿದೆ. ಭಾರತೀಯ ಸೈನಿಕರ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಆಪರೇಷನ್ ದೋಸ್ತ್ ಅಡಿಯಲ್ಲಿ ಭಾರತ ಟರ್ಕಿಗೆ ಭೂಕಂಪದ ಭೀಕರತೆಯಿಂದ ಹೊರಬರಲು ಬೇಕಾದ ಎಲ್ಲಾ ನೆರವನ್ನು ನೀಡುತ್ತಿದೆ. ಈಗಾಗಲೇ ರಕ್ಷಣಾ ತಂಡ, ಶ್ವಾನದಳಗಳು ಸೇರಿದಂತೆ ಟನ್ಗಟ್ಟಲೆ ಭೂಕಂಪ ಪರಿಹಾರ ಸಾಮಗ್ರಿಗಳನ್ನು ಕಳುಹಿಸಿಕೊಟ್ಟಿದೆ.
We Care.#IndianArmy#Türkiye pic.twitter.com/WoV3NhOYap
— ADG PI – INDIAN ARMY (@adgpi) February 9, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.