News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವಿಧಾನಮಂಡಲ ಅಧಿವೇಶನ ಆರಂಭ: ಸರ್ಕಾರದ ಕಾರ್ಯ ಕೊಂಡಾಡಿದ ರಾಜ್ಯಪಾಲ

ಬೆಂಗಳೂರು: ವಿಧಾನಮಂಡಲ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಿದ್ದು,  ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​​ ಅವರು ಭಾಷಣ ಮಾಡಿದರು.

“ಸರ್ಕಾರವು ರೈತರು, ಕಾರ್ಮಿಕರು, ಬಡವರು, ದುರ್ಬಲ ವರ್ಗದವರು ಮತ್ತು ಅವಕಾಶ ವಂಚಿತರ ಕಲ್ಯಾಣ ಮತ್ತು ಅಭಿವೃದ್ಧಿಗೆ ಬದ್ಧವಾಗಿದೆ. ಅಭಿವೃದ್ಧಿ ಪಥದಲ್ಲಿ ಮುಂಚೂಣಿಯ ರಾಜ್ಯವಾಗಿ ದಾಪುಗಾಲಿಡುತ್ತಿದೆ. ಎಲ್ಲರನ್ನು ಒಳಗೊಂಡ ಅಭಿವೃದ್ಧಿಯ ಮಾದರಿಯನ್ನು ನನ್ನ ಸರ್ಕಾರ ಅನುಸರಿಸುತ್ತಿದೆ” ಎಂದು ರಾಜ್ಯಪಾಲರು ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮುಂದಿನ 25 ವರ್ಷಗಳ ಅಮೃತ ಕಾಲದಲ್ಲಿ ಹಾಕಿಕೊಟ್ಟ ಪ್ರಗತಿ ಪಥವನ್ನು ಕರ್ನಾಟಕ ಯಶಸ್ವಿಯಾಗಿ ಮುನ್ನಡೆಸುವ ವಿಶ್ವಾಸ ಇದೆ ಎಂದಿದ್ದಾರೆ.

ರೈತರ ಕುಟುಂಬವನ್ನು ಸದೃಢಗೊಳಿಸಲು ಸರ್ಕಾರವು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದ ರಾಜ್ಯಪಾಲರು, ಮುಖ್ಯಮಂತ್ರಿ ರೈತ ವಿದ್ಯಾನಿಧಿಯನ್ನು ನೇಕಾರರು, ಕೃಷಿ ಕಾರ್ಮಿಕರು, ಮುಂತಾದ ವಿವಿಧ ವರ್ಗಗಳಿಗೆ ವಿಸ್ತರಿಸಲಾಗಿದೆ. ಅದರಂತೆ 10.79 ಲಕ್ಷ ವಿದ್ಯಾರ್ಥಿಗಳಿಗೆ 484 ಕೋಟಿ ರೂಪಾಯಿಗಳ ವಿದ್ಯಾರ್ಥಿ ವೇತನವನ್ನು ನೇರ ನಗದು ಮೂಲಕ ವರ್ಗಾಯಿಸಲಾಗಿದೆ. ರೈತಶಕ್ತಿ ಯೋಜನೆಯಡಿ ಕೃಷಿ ಯಾಂತ್ರೀಕರಣ ಪ್ರೋತ್ಸಾಹಿಸಲು ಪ್ರತಿ ಎಕರೆಗೆ 250 ರೂಪಾಯಿಗಳಂತೆ ಗರಿಷ್ಠ ಐದು ಎಕರೆಗೆ ಡೀಸೆಲ್‌ ಸಹಾಯಧನ ನೀಡುತ್ತಿದ್ದು, ಇದಕ್ಕಾಗಿ, 400 ಕೋಟಿ ರೂಪಾಯಿಗಳನ್ನು ಒದಗಿಸಿದ್ದು, 386.98 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದಿದ್ದಾರೆ.

ಕೀಟ, ರೋಗ, ಕಳೆಬಾಧೆ ಮತ್ತು ಮಣ್ಣಿನ ಪೋಷಕಾಂಶದ ಸಮರ್ಪಕ ನಿರ್ವಹಣೆಗಾಗಿ ಕೃಷಿ ಸಂಜೀವಿನಿ ಯೋಜನೆಯಡಿ 160 ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯಗಳನ್ನು ಲೋಕಾರ್ಪಣ ಮಾಡಿದ್ದು, 2022-23ನೇ ಸಾಲಿಗೆ 64 ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯವನ್ನು ಅನುಷ್ಠಾನ ಮಾಡಲಾಗಿದೆ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top