News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬೊಹ್ರಾ ಸಮುದಾಯದ ಅರೇಬಿಕ್ ಅಕಾಡೆಮಿ ಉದ್ಘಾಟಿಸಿದ ಮೋದಿ

ಮುಂಬೈ:  ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಅಂಧೇರಿ ಈಸ್ಟ್‌ನಲ್ಲಿ ದಾವೂದಿ ಬೊಹ್ರಾ ಸಮುದಾಯದ ಅರೇಬಿಕ್ ಅಕಾಡೆಮಿಯನ್ನು ಉದ್ಘಾಟಿಸಿದರು.

ಉದ್ಘಾಟನಾ ಸಮಾರಂಭದಲ್ಲಿ ವೇದಿಕೆಯಲ್ಲಿ ಪ್ರಧಾನಿ ಮೋದಿಯವರೊಂದಿಗೆ ವಿಶ್ವಾದ ದಾವೂದಿ ಬೊಹ್ರಾ ಸಮುದಾಯದ ಪ್ರಸ್ತುತ ನಾಯಕ ಮತ್ತು 53 ನೇ ಅಲ್-ದಾಯಿ ಅಲ್-ಮುತ್ಲಾಕ್ ನಾಯಕ ಸೈಯದ್ನಾ ಮುಫದ್ದಲ್ ಸೈಫುದ್ದೀನ್ ಪಾಲ್ಗೊಂಡರು.

ಮೋದಿ ಅವರು ಈ ಸಮುದಾಯದೊಂದಿಗೆ ಆತ್ಮೀಯ ಸಂಬಂಧವನ್ನು ಹೊಂದಿದ್ದು, ಕಳೆದ 9 ವರ್ಷಗಳಲ್ಲಿ ಪ್ರಧಾನಿಯಾಗಿ ಹಲವಾರು ಬಾರಿ ಈ ಪಂಥದ ನಾಯಕರು, ಸದಸ್ಯರೊಂದಿಗೆ ಸಂವಾದ ನಡೆಸಿದ್ದಾರೆ.

ಇಂದು ಅಲ್ಜಮಿಯಾ-ತುಸ್-ಸೈಫಿಯಾ ಅರೇಬಿಕ್ ಅಕಾಡೆಮಿಯ ಮುಂಬೈ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಇದು ಬೊಹ್ರಾ ಸಮುದಾಯದ ಕಲಿಕೆಯ ಸಂಪ್ರದಾಯಗಳು ಮತ್ತು ಸಾಹಿತ್ಯ ಸಂಸ್ಕೃತಿಯನ್ನು ರಕ್ಷಿಸುವ ಸಂಸ್ಥೆಯಾಗಿ ಕಾರ್ಯನಿರ್ವಹಿಸಲಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top