News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ʼಡೆಟಾಲ್‌ ಹಾಕಿದರೂ ನಿಮ್ಮ ಬಾಯಿ ಸ್ವಚ್ಛವಾಗದು‌ʼ- ಕಾಂಗ್ರೆಸ್ಸಿಗರಿಗೆ ಸೀತಾರಾಮನ್

ನವದೆಹಲಿ: ರಾಜ್ಯ ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡುವಾಗ ಹಿಂದಿನ ಬಜೆಟ್‌ ಪ್ರತಿಯನ್ನು ಓದಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ವಿರುದ್ಧ ಲೋಕಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಾಗ್ದಾಳಿ ನಡೆಸಿದರು, “ಯಾರೂ ಇಂತಹ ಪರಿಸ್ಥಿತಿಯನ್ನು ಎದುರಿಸಬಾರದು ಎಂದು ನಾನು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

ಕೇಂದ್ರದ ಆಡಳಿತಾರೂಢ ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಸೀತಾರಾಮನ್, “ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವುದು ಆಶ್ಚರ್ಯಕರವಾಗಿದೆ. ಕಾಂಗ್ರೆಸ್ ಡೆಟಾಲ್‌ನಿಂದ ಬಾಯಿ ಸ್ವಚ್ಛಗೊಳಿಸಿದರೂ ಅದು ಸ್ವಚ್ಛವಾಗುವುದಿಲ್ಲ. ರಾಜಸ್ಥಾನದಲ್ಲಿ ಇಂದು ದೊಡ್ಡ ಅವ್ಯವಸ್ಥೆಯೊಂದು ನಡೆದಿದೆ. ಕಳೆದ ವರ್ಷದ ಬಜೆಟ್ ಓದಲಾಗಿದೆ. ತಪ್ಪುಗಳು ಯಾರಿಂದಾದರೂ ಆಗಬಹುದು, ಆದರೆ ಇಂತಹ ಪರಿಸ್ಥಿತಿ ಯಾರಿಗೂ ಬರಬಾರದು ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

ಜಾಗತಿಕ ಆರ್ಥಿಕ ಹಿನ್ನೆಡೆಯ ಹೊರತಾಗಿಯೂ ಭಾರತವು ಇನ್ನೂ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ ಎಂದು ಅವರು ಪ್ರತಿಪಾದಿಸಿದರು.

ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು ಸರ್ಕಾರವು ಅತ್ಯುತ್ತಮ ಮಾರ್ಗವನ್ನು ಆರಿಸಿಕೊಂಡಿದೆ ಎಂದ ಅವರು, ಈ ಬಾರಿಯ ಬಜೆಟ್ ಹಣಕಾಸಿನ ವಿವೇಕದ ಮಿತಿಯಲ್ಲಿ ಭಾರತದ ಅಭಿವೃದ್ಧಿಯ ಅಗತ್ಯತೆಗಳನ್ನು ಸಮತೋಲನಗೊಳಿಸುತ್ತದೆ. ಇದು ಮಧ್ಯಮ ವರ್ಗ, ಉದ್ಯೋಗ ಸೃಷ್ಟಿ, MSME, ಕೃಷಿ ವಲಯ, ಗ್ರಾಮೀಣ ಜನಸಂಖ್ಯೆ, ಆರೋಗ್ಯ ಮತ್ತು ಹಸಿರು ಬೆಳವಣಿಗೆಯ ಮೇಲೆ ಕೇಂದ್ರೀಕರಿಸುತ್ತದೆ ಎಂದು ಹೇಳಿದ್ದಾರೆ.

ತೆರಿಗೆ ವಿನಾಯಿತಿ ಮಿತಿಯನ್ನು 2 ರಿಂದ 3 ಲಕ್ಷ ರೂಪಾಯಿಗೆ ಹೆಚ್ಚಿಸಿರುವುದರಿಂದ ಬಜೆಟ್‌ನಲ್ಲಿ ಘೋಷಿಸಲಾದ ಹೊಸ ತೆರಿಗೆ ವ್ಯವಸ್ಥೆಯು ಅತ್ಯಂತ ಆಕರ್ಷಕವಾಗಿದೆ ಎಂದು ಸೀತಾರಾಮನ್ ಹೇಳಿದರು.

ಈ ಹೊಸ ತೆರಿಗೆ ಪದ್ಧತಿಯು ಮಧ್ಯಮ ವರ್ಗದ ಬಹುಪಾಲು ತೆರಿಗೆದಾರರಿಗೆ ಪ್ರಯೋಜನವನ್ನು ನೀಡುತ್ತದೆ, 7 ಲಕ್ಷದವರೆಗಿನ ಆದಾಯದ ಮೇಲೆ ರಿಯಾಯಿತಿಯನ್ನು ಒದಗಿಸಲಾಗಿದೆ ಎಂದು ಅವರು ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top