News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪುತ್ತೂರು: ಹನುಮಗಿರಿ ಪಂಚಮುಖಿ ಆಂಜನೇಯ ದೇಗುಲಕ್ಕೆ ಅಮಿತ್‌ ಶಾ ಭೇಟಿ

ಪುತ್ತೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ದಕ್ಷಿಣಕನ್ನಡದ ಪುತ್ತೂರಿಗೆ ಆಗಮಿಸಿದ್ದು,  ಈಶ್ವರ ಮಂಗಲದ ಹನುಮಗಿರಿ ಪಂಚಮುಖಿ ಆಂಜನೇಯ ದೇವಾಲಯಕ್ಕೆ ಭೇಟಿಪು ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನ ಆಡಳಿತ ಮಂಡಳಿ ಅಮಿತ್ ಶಾ ಗೆ ಬೆಳ್ಳಿ ಗದೆ ನೀಡಿ ಸ್ವಾಗತಿಸಿತು.

ಕೇರಳದ ಕಣ್ಣೂರು ವಿಮಾನ ನಿಲ್ದಾಣದಿಂದ ಭಾರತೀಯ ವಾಯುಸೇನೆ ಹೆಲಿಕಾಪ್ಟರ್‌ನಲ್ಲಿ ಪುತ್ತೂರಿಗೆ ಆಗಮಿಸಿದ ಅಮಿತ್ ಶಾ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತಿತರರು ಆತ್ಮೀಯ ಸ್ವಾಗತ ನೀಡಿದರು.

ನಂತರ ಸುಮಾರು 2.5 ಎಕರೆ ಜಾಗದಲ್ಲಿ ನಿರ್ಮಿಸಿರುವ ಭಾರತ್ ಮಾತಾ ಮಂದಿರವನ್ನು ಅಮಿತ್ ಶಾ ಉದ್ಘಾಟಿಸಿದರು

ಇಂದು ಸಂಜೆ ಅವರು ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳ ಪ್ರಮುಖ ಮುಖಂಡರೊಂದಿಗೆ  ಮಂಗಳೂರಿನಲ್ಲಿ ಸಭೆ ನಡೆಸಿ ಚುನಾವಣೆಗೆ ಸಂಬಂಧಿಸಿದಂತೆ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಕ್ಯಾಂಪ್ಕೊ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಂಜೆ ಮಂಗಳೂರಿಗೆ ಆಗಮಿಸಿ ಮಂಗಳೂರಿನ ಹೊರ ವಲಯದ ಕೆಂಜಾರಿನಲ್ಲಿ ನಡೆಯುವ ಪಕ್ಷದ ವಿಶೇಷ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top