News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರಿಡಲು ನಿರ್ಧಾರ

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಅವರು ಈ ಬಗ್ಗೆ ಇಂದು ಪ್ರಕಟಿಸಿದ್ದಾರೆ.

ಇಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಯಡಿಯೂರಪ್ಪ ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನಿರಿಸಲಾಗುವುದು ಎಂದು ಘೋಷಿಸಿದರು.

ಕಳೆದ ಹಲವು ದಿನಗಳಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಾರ ಹೆಸರಿಡಬೇಕು ಎಂಬುದರ ಬಗ್ಗೆ ಸುದೀರ್ಘ ಚರ್ಚೆಗಳು ನಡೆದಿದ್ದವು. ಯಡಿಯೂರಪ್ಪ ಹೆಸರು ಮುಂಚೂಣಿಯಲ್ಲಿತ್ತು, ಆದರೆ ಯಡಿಯೂರಪ್ಪ ಅವರೇ ತಮ್ಮ ಹೆಸರು ಬೇಡ ಎಂದು ಹೇಳಿದ್ದರು.

ಸರ್ಕಾರಕ್ಕೆ ಪತ್ರ ಬರೆದು ತಮ್ಮ ಹೆಸರಿನ ಬದಲಾಗಿ ರಾಷ್ಟ್ರಕವಿ ಕುವೆಂಪು ಹೆಸರಿಡಲು  ಸಲಹೆಯನ್ನು ನೀಡಿದ್ದರು. ಬಿಎಸ್​ವೈ ಸಲಹೆಯಂತೆ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರಿಡಲು ನಿರ್ಧರಿಸಲಾಗಿದೆ.

ಈ ವಿಮಾನ ನಿಲ್ದಾಣವನ್ನು ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top