News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬೆಂಗಳೂರು: ‘ಏರೋ ಇಂಡಿಯಾ 2023’ ಉದ್ಘಾಟಿಸಿದ ಮೋದಿ

ನವದೆಹಲಿ: ಏಷ್ಯಾದ ಅತಿದೊಡ್ಡ ಏರೋ ಶೋ  ‘ಏರೋ ಇಂಡಿಯಾ 2023’ ರ 14 ನೇ ಆವೃತ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿನಲ್ಲಿ ಉದ್ಘಾಟಿಸಿದರು.

“ಏರೋ ಇಂಡಿಯಾವು ಭಾರತದ ಸಾಮರ್ಥ್ಯಗಳನ್ನು ವಿಸ್ತರಿಸುವ ಒಂದು ಉದಾಹರಣೆಯಾಗಿದೆ. ಇಲ್ಲಿ ಸುಮಾರು 100 ರಾಷ್ಟ್ರಗಳ ಉಪಸ್ಥಿತಿಯು ಭಾರತದ ಮೇಲಿನ ವಿಶ್ವದ ನಂಬಿಕೆ ಹೆಚ್ಚಾಗಿದೆ ಎಂಬುದನ್ನು ತೋರಿಸುತ್ತದೆ. ಭಾರತ ಮತ್ತು ಪ್ರಪಂಚದ 700 ಕ್ಕೂ ಹೆಚ್ಚು ಪ್ರದರ್ಶಕರು ಭಾಗವಹಿಸುತ್ತಿದ್ದಾರೆ. ಇದು ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ” ಎಂದು ಮೋದಿ ಹೇಳಿದ್ದಾರೆ.

2024-25ರ ವೇಳೆಗೆ ರಕ್ಷಣಾ ರಫ್ತುಗಳನ್ನು 5 ಬಿಲಿಯನ್ ಡಾಲರ್‌ಗೆ ಕೊಂಡೊಯ್ಯುವುದು ಸರ್ಕಾರದ ಗುರಿಯಾಗಿದೆ. ಭಾರತವು ಶೀಘ್ರದಲ್ಲೇ ವಿಶ್ವದ ಅತಿದೊಡ್ಡ ರಕ್ಷಣಾ ಉತ್ಪಾದನಾ ನೆಲೆಯಾಗಲಿದೆ. ಏರೋ ಇಂಡಿಯಾದ ಥೀಮ್ – ‘ದ ರನ್‌ವೇ ಟು ಎ ಬಿಲಿಯನ್ ಆಪರ್ಚುನಿಟೀಸ್’ ವಿವಿಧ ಕ್ಷೇತ್ರಗಳಲ್ಲಿ ದೇಶದ ಬೆಳವಣಿಗೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು

. ರಕ್ಷಣಾ ಕ್ಷೇತ್ರದಲ್ಲಿ ದೇಶವನ್ನು ಬಲಿಷ್ಠಗೊಳಿಸುವಂತೆ ಕರ್ನಾಟಕದ ಯುವಕರಿಗೆ ಮನವಿ ಮಾಡಿದರು. ತಂತ್ರಜ್ಞಾನ ಕ್ಷೇತ್ರದಲ್ಲಿ ಅವರ ಅಪಾರ ಪರಿಣತಿಯನ್ನು ಅವರು ಶ್ಲಾಘಿಸಿದರು.

“ಬೆಂಗಳೂರಿನ ಆಕಾಶ ನವ ಭಾರತದ ವೈಭವಕ್ಕೆ ಸಾಕ್ಷಿಯಾಗಿದೆ. ಇಂದು ದೇಶ ಹೊಸ ಎತ್ತರವನ್ನು ಮುಟ್ಟುವ ಜೊತೆಗೆ ಎತ್ತರಗಳನ್ನು ದಾಟಿ ಮುನ್ನಡೆಯುತ್ತಿದೆ. ರಕ್ಷಣಾ ಮತ್ತು ಏರೋ ಸ್ಪೇಸ್‌ ಕ್ಷೇತ್ರಗಳಲ್ಲಿ ನಮ್ಮ ದೇಶ ಹೊಂದಿರುವ ಅನಿಯಮಿತ ಸಾಮರ್ಥ್ಯವನ್ನು ಪ್ರದರ್ಶಿಸಲು ಏರೋ ಇಂಡಿಯಾ ಅದ್ಭುತ ವೇದಿಕೆಯಾಗಿದೆ. ಭೂಮಿಯಿಂದ ಆಕಾಶದವರೆಗೆ ನವ ಭಾರತದಲ್ಲಿ ಅವಕಾಶಗಳು ವಿಫುಲವಾಗಿವೆ. ಆತ್ಮನಿರ್ಭರ ಭಾರತದ ಶಕ್ತಿ ಹೀಗೇ ಮುಂದುವರಿಯಲಿದೆ” ಎಂದಿದ್ದಾರೆ.

ಐದು ದಿನಗಳ ಕಾರ್ಯಕ್ರಮವು ಸ್ವದೇಶಿ ಉಪಕರಣಗಳು ಮತ್ತು ತಂತ್ರಜ್ಞಾನಗಳನ್ನು ಪ್ರದರ್ಶಿಸುವುದು ಮತ್ತು ವಿದೇಶಿ ಕಂಪನಿಗಳೊಂದಿಗೆ ಪಾಲುದಾರಿಕೆಯನ್ನು ರೂಪಿಸುವುದರ ಮೇಲೆ ಕೇಂದ್ರೀಕರಿಸುತ್ತದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top