News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಜಭವನದಲ್ಲಿ ಶ್ರೀಗಂಧದ ಸಸಿ ನೆಟ್ಟ ಮೋದಿ

ಬೆಂಗಳೂರು: ಏರೋ ಇಂಡಿಯಾ ಉದ್ಘಾಟನೆಗಾಗಿ ಇಂದು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ರಾಜಭವನದಲ್ಲಿ ಶ್ರೀಗಂಧದ ಸಸಿಯನ್ನು ನೆಡುವ ಮೂಲಕ  ಮಹತ್ವದ ಸಂದೇಶವನ್ನು ಸಾರಿದ್ದಾರೆ.

ಭಾನುವಾರ ಬೆಂಗಳೂರಿಗೆ ಬಂದಿರುವ ಪ್ರಧಾನಿ ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಿದ್ದರು. ಸೋಮವಾರ ಬೆಳಗ್ಗೆ ರಾಜಭವನದ ಮುಂಭಾಗದ ಹುಲ್ಲುಹಾಸಿನಲ್ಲಿ ಶ್ರೀಗಂಧದ ಸಸಿಯನ್ನು ನೆಟ್ಟರು ಎಂದು ವರದಿಗಳು ತಿಳಿಸಿವೆ.

ಈ ಸಂದರ್ಭಧಲ್ಲಿ ರಾಜಭವನದಲ್ಲಿನ ಸಸ್ಯಗಳು, ಜಾತಿಗಳು, ಗುಣಲಕ್ಷಣಗಳು ಮತ್ತು ಬಳಕೆಯ ಕುರಿತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಮೋದಿಗೆ ವಿವರಿಸಿದರು ಎನ್ನಲಾಗಿದೆ.

ಅಲ್ಲದೇ ಪ್ರಧಾನಿಯವರು ಸಿನಿಮಾ ರಂಗದವರು, ಕ್ರಿಕೆಟ್ ದಿಗ್ಗಜರು ಹಾಗೂ ಇತರ ಗಣ್ಯ ವ್ಯಕ್ತಿಗಳನ್ನು ಭೇಟಿಯಾಗಿ ಅವರೊಂದಿಗೆ ಔತಣಕೂಟದಲ್ಲಿ ಭಾಗಿಯಾಗಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top