News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನಾಳೆ ಫಿಜಿಗೆ ಜೈಶಂಕರ್: 12 ನೇ ವಿಶ್ವ ಹಿಂದಿ ಸಮ್ಮೇಳನದಲ್ಲಿ ಭಾಗಿ

ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌ ಅವರು ನಾಳೆಯಿಂದ ಫೆಬ್ರವರಿ 17 ರವರೆಗೆ 12 ನೇ ವಿಶ್ವ ಹಿಂದಿ ಸಮ್ಮೇಳನದಲ್ಲಿ ಭಾಗವಹಿಸುವ ಸಲುವಾಗಿ ಫಿಜಿಗೆ ಭೇಟಿ ನೀಡಲಿದ್ದಾರೆ. ಭಾರತ ಸರ್ಕಾರದ ಸಹ ಆತಿಥ್ಯದಲ್ಲಿ ಸಮ್ಮೇಳನವನ್ನು ಆಯೋಜನೆಗೊಳಿಸುತ್ತಿದೆ.

ಜೈಶಂಕರ್ ಅವರ ಫಿಜಿಗೆ ಇದು ಮೊದಲ ಭೇಟಿಯಾಗಿದೆ. ಡಿಸೆಂಬರ್ 2022 ರಲ್ಲಿ ಫಿಜಿಯಲ್ಲಿ ಹೊಸ ಸರ್ಕಾರ ರಚನೆಯಾದ ನಂತರ ಅಲ್ಲಿಗೆ ಭೇಟಿ ನೀಡುತ್ತಿರುವ ಮೊದಲ ವಿದೇಶಿ ಸಚಿವರ ನಿಯೋಗ ಇದಾಗಿದೆ. ಫಿಜಿಯ ಹೊಸ ನಾಯಕತ್ವದೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

“ವಿದೇಶಾಂಗ ವ್ಯವಹಾರಗಳ ನಿಯೋಗ ಫೆ.18 ರಂದು ಆಸ್ಟ್ರೇಲಿಯಾದ ಸಿಡ್ನಿಗೆ ಭೇಟಿ ನೀಡಲಿದೆ.  2022ರ ಫೆಬ್ರವರಿಯಲ್ಲಿ ಅವರು ಆಸ್ಟ್ರೇಲಿಯಾಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ನಂತರ ಇದು ಅವರ ಮೂರನೇ ಭೇಟಿಯಾಗಿದೆ. ಅವರು ಸಿಡ್ನಿಯಲ್ಲಿ ಆಸ್ಟ್ರೇಲಿಯಾದ ನಾಯಕತ್ವದೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ ಮತ್ತು ಸಿಡ್ನಿ ಸಮ್ಮೇಳನವನ್ನು ಮೊದಲ ಬಾರಿಗೆ ಆಸ್ಟ್ರೇಲಿಯಾದಲ್ಲಿ ನಡೆಸಲಾಗುವುದು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top