News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹಂಪಿ ಪ್ರವಾಸೋದ್ಯಮ ಸರ್ಕ್ಯೂಟ್‌ಗೆ ಲಕ್ಕುಂಡಿ: ಸರ್ಕಾರ ಚಿಂತನೆ

ನವದೆಹಲಿ: ಜಗತ್ತಿನಾದ್ಯಂತದ ಪ್ರವಾಸಿಗರನ್ನು ಸೆಳೆಯುವ ಉದ್ದೇಶದೊಂದಿಗೆ ಆರಂಭಿಸಿರುವ ಹಂಪಿ ಪ್ರವಾಸೋದ್ಯಮ ಸರ್ಕ್ಯೂಟ್‌ನಲ್ಲಿ ಲಕ್ಕುಂಡಿಯನ್ನು ಸೇರಿಸಲು ರಾಜ್ಯ ಸರ್ಕಾರ ಯೋಜಿಸಿದೆ.

ಐತಿಹಾಸಿಕ ಪ್ರವಾಸೋದ್ಯಮದಲ್ಲಿ ಲಕ್ಕುಂಡಿಯನ್ನು ಹಂಪಿಯಂತೆಯೇ ಪ್ರಮುಖವಾದ ತಾಣವಾಗಿಸಲು ಪ್ರವಾಸೋದ್ಯಮ ಇಲಾಖೆ ವತಿಯಿಂದ ಮಾಸ್ಟರ್ ಪ್ಲಾನ್ ರಚಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇತ್ತೀಚಿಗೆ ಲಕ್ಕುಂಡಿ ಉತ್ಸವ ಉದ್ಘಾಟಿಸಿ ಮಾತನಾಡಿದ ಸಿ.ಎಂ.ಬೊಮ್ಮಾಯಿ, “ಗದಗ ಜಿಲ್ಲೆಯ ವಿಜಯನಗರ ಸಾಮ್ರಾಜ್ಯದ ವೈಭವವನ್ನು ಶಾಸನಗಳು ಬಿಂಬಿಸುತ್ತವೆ. ಸುಂದರ ಶಿಲ್ಪಕಲೆಯ ಸಂಗಮ ಲಕ್ಕುಂಡಿಯಾಗಿದ್ದು, ಈ ಐತಿಹಾಸಿಕ ಸ್ಥಳವನ್ನು ಅಭಿವೃದ್ಧಿಪಡಿಸುವ ಜೊತೆಗೆ ಜನಸ್ನೇಹಿಯಾಗಿಸಲು ಸರ್ಕಾರ ಕ್ರಮಕೈಗೊಳ್ಳಲಿದೆ. ಪ್ರವಾಸೋದ್ಯಮದ ಉತ್ತೇಜನಕ್ಕಾಗಿ ಲಕ್ಕುಂಡಿಯನ್ನು ಹಂಪಿ ಸರ್ಕ್ಯೂಟ್‌ಗೆ ಸೇರಿಸಲಾಗುವುದು ಮತ್ತು ಪ್ರಪಂಚದಾದ್ಯಂತದ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಅಭಿವೃದ್ಧಿಪಡಿಸಲಾಗುವುದು” ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top