News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಏರ್‌ಬಸ್‌ನಿಂದ 250 ವಿಮಾನಗಳನ್ನು ಖರೀದಿಸಲಿದೆ ಏರ್‌ ಇಂಡಿಯಾ

ನವದೆಹಲಿ: ಟಾಟಾ ಸಮೂಹವು ಏರ್‌ ಇಂಡಿಯಾಗಾಗಿ ಏರ್‌ಬಸ್‌ನಿಂದ 250 ವಿಮಾನಗಳನ್ನು ಖರೀದಿಸಲಿದ್ದು, ಇದು ವಿಶ್ವದ ಅತಿದೊಡ್ಡ ವಿಮಾನಯಾನ ಒಪ್ಪಂದವಾಗಿದೆ. ಒಪ್ಪಂದವು 40 A350 ವೈಡ್-ಬಾಡಿ ದೀರ್ಘ-ಶ್ರೇಣಿಯ ವಿಮಾನಗಳು ಮತ್ತು 210 ನ್ಯಾರೋ-ಬಾಡಿ ವಿಮಾನಗಳನ್ನು ಒಳಗೊಂಡಿದೆ.

ಪ್ರಧಾನಿ ನರೇಂದ್ರ ಮೋದಿ, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಮತ್ತು ಟಾಟಾ ಗ್ರೂಪ್‌ ಮುಖ್ಯಸ್ಥ ರತನ್ ಟಾಟಾ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಿದ ಏರ್‌ಬಸ್ ಮುಖ್ಯ ಕಾರ್ಯನಿರ್ವಾಹಕ ಗುಯಿಲೌಮ್ ಫೌರಿ ಅವರು, “ಏರ್ ಇಂಡಿಯಾದ ಪುನರುಜ್ಜೀವನಕ್ಕೆ ಸಹಾಯ ಮಾಡಲು ಏರ್‌ಬಸ್‌ಗೆ ಇದು ಐತಿಹಾಸಿಕ ಕ್ಷಣವಾಗಿದೆ” ಎಂದು ಹೇಳಿದರು.

ಏರ್‌ಬಸ್‌ನೊಂದಿಗಿನ ಒಪ್ಪಂದವು 470 ವಿಮಾನಗಳಿಗಾಗಿ ಏರ್ ಇಂಡಿಯಾದ ಬೃಹತ್ ಆರ್ಡರ್‌ನ ಭಾಗವಾಗಿದೆ, ಇದರಲ್ಲಿ ಬೋಯಿಂಗ್‌ನಿಂದ 220 ವಿಮಾನಗಳ ಆದೇಶವೂ ಸೇರುವ ಸಾಧ್ಯತೆಯಿದೆ.

ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್ ಅವರು ಭಾಗವಹಿಸಿದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಮಾತನಾಡಿದ ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರೋನ್‌ ಅವರು, “ಈ ಒಪ್ಪಂದವು ಭಾರತ ಮತ್ತು ಫ್ರಾನ್ಸ್ ನಡುವಿನ ಸೌಹಾರ್ದ ಸಂಬಂಧದಲ್ಲಿ ಒಂದು ಮೈಲಿಗಲ್ಲು” ಎಂದು ಹೇಳಿದರು.

ವಾಯುಯಾನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ಪಾಲುದಾರನಾಗಲಿದೆ. ಮುಂದಿನ 15 ವರ್ಷಗಳಲ್ಲಿ ಭಾರತಕ್ಕೆ 2,500 ವಿಮಾನಗಳು ಬೇಕಾಗುತ್ತವೆ ಎಂದು ಈ ಸಂದರ್ಭದಲ್ಲಿ ಮೋದಿ ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top