ನವದೆಹಲಿ: ನಾಳೆ ತ್ರಿಪುರಾದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗವು ವಿಸ್ತಾರವಾದ ವ್ಯವಸ್ಥೆಗಳನ್ನು ಮಾಡಿದೆ. ರಾಜ್ಯದಲ್ಲಿ ಒಟ್ಟು 3,328 ಮತಗಟ್ಟೆಗಳಿವೆ. ಶಾಂತಿಯುತ ಮತದಾನಕ್ಕಾಗಿ ಚುನಾವಣಾ ಆಯೋಗವು ಎಲ್ಲಾ ಮತಗಟ್ಟೆಗಳಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳನ್ನು ನಿಯೋಜಿಸಿದೆ.
ತ್ರಿಪುರಾ ರಾಜ್ಯಾದ್ಯಂತ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಭಾರೀ ನಿಯೋಜನೆಯೊಂದಿಗೆ, ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಗಡಿ ಭದ್ರತಾ ಪಡೆ ಕೂಡ ಕಟ್ಟುನಿಟ್ಟಿನ ನಿಗಾ ವಹಿಸುತ್ತಿದೆ.
ಈ ಭಾರಿ ಕುತೂಹಲ ಮೂಡಿಸಿರುವ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಡಾ.ಮಾಣಿಕ್ ಸಹಾ, ಉಪಮುಖ್ಯಮಂತ್ರಿ ಜಿಷ್ಣು ದೆಬ್ಬಾರ್ಮನ್, ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವೆ ಪ್ರತಿಮಾ ಭೌಮಿಕ್, ಸಿಪಿಐ(ಎಂ) ನಾಯಕ ಜಿತೇಂದ್ರ ಚೌಧರಿ, ಕಾಂಗ್ರೆಸ್ ನಾಯಕ ಸೇರಿದಂತೆ ವಿವಿಧ ರಾಜಕೀಯ ದಿಗ್ಗಜರ ರಾಜಕೀಯ ಭವಿಷ್ಯ ನಿರ್ಧರಿತವಾಗಲಿದೆ.
60 ಸ್ಥಾನಗಳ ತ್ರಿಪುರಾ ವಿಧಾನಸಭೆಗೆ ನಾಳೆ ಬೆಳಗ್ಗೆ 7 ಗಂಟೆಗೆ ಮತದಾನ ನಡೆಯಲಿದ್ದು, ಸಂಜೆ 4 ಗಂಟೆಗೆ ಮುಕ್ತಾಯವಾಗಲಿದೆ. ಮೇಘಾಲಯ ಮತ್ತು ನಾಗಾಲ್ಯಾಂಡ್ ಜೊತೆಗೆ ಮಾರ್ಚ್ 2 ರಂದು ಮತ ಎಣಿಕೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.