ನವದೆಹಲಿ: ಇಂದು ಬಿಡುಗಡೆಯಾದ ಐಸಿಸಿ ಟೆಸ್ಟ್ ರ್ಯಾಂಕಿಂಗ್ನಲ್ಲಿ ಆಸ್ಟ್ರೇಲಿಯವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಟೀಂ ಇಂಡಿಯಾ ಎಲ್ಲಾ 3 ಫಾರ್ಮ್ಯಾಟ್ಗಳಲ್ಲಿ ನಂ.1 ರ್ಯಾಂಕಿಂಗ್ ಪಡೆದ ತಂಡವಾಗಿ ಹೊರಹೊಮ್ಮಿದೆ.
ನಾಗ್ಪುರ ಟೆಸ್ಟ್ನಲ್ಲಿ ಗೆಲುವಿನ ನಂತರ ಭಾರತ ಈಗ 115 ಅಂಕಗಳನ್ನು ಹೊಂದಿದೆ ಮತ್ತು ಆಸ್ಟ್ರೇಲಿಯಾ ತಂಡ 111 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ಕುಸಿದಿದೆ.
ಅಂತರಾಷ್ಟ್ರೀಯ ಕ್ರಿಕೆಟ್, ಟೆಸ್ಟ್, ಏಕದಿನ ಮತ್ತು ಟಿ20 ಮೂರು ಮಾದರಿಗಳಲ್ಲಿ ವಿಶ್ವದ ನಂ.1 ತಂಡವಾಗಿ ಈಗ ಭಾರತ ಹೊರಹೊಮ್ಮಿದೆ. ಭಾರತ ಒಂದೇ ಬಾರಿಗೆ ಎಲ್ಲಾ ಮಾದರಿಗಳಲ್ಲಿ ಅಗ್ರ ಶ್ರೇಯಾಂಕ ಪಡೆದಿರುವುದು ಇದೇ ಮೊದಲು. ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಇದೆಲ್ಲವೂ ಸಂಭವಿಸಿದೆ, ಈ ಗಮನಾರ್ಹ ಸಾಧನೆಯನ್ನು ಮಾಡಿದ ಮೊದಲ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ಕಳೆದ ತಿಂಗಳು ತವರಿನಲ್ಲಿ ನ್ಯೂಜಿಲೆಂಡ್ ತಂಡವನ್ನು 3-0 ಅಂತರದಿಂದ ಸೋಲಿಸಿದ ಭಾರತ ಏಕದಿನದಲ್ಲಿ ನಂ.1 ರ್ಯಾಂಕಿಂಗ್ ತಲುಪಿತ್ತು.
ಅಗ್ರಸ್ಥಾನವನ್ನು ಉಳಿಸಿಕೊಳ್ಳಲು ಮತ್ತು ಜೂನ್ನಲ್ಲಿ ಇಂಗ್ಲೆಂಡ್ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಅರ್ಹತೆ ಪಡೆಯುವ ಅವಕಾಶವನ್ನು ಬಲಪಡಿಸಲು ಭಾರತವು ನವದೆಹಲಿಯಲ್ಲಿ ನಡೆಯಲಿರುವ ಮುಂದಿನ ಟೆಸ್ಟ್ನಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಬೇಕಾಗಿದೆ.
Team India continues to dominate world cricket as it secures the top rank in all three formats. In recently concluded tournaments, the youngsters, in particular, have played brilliantly and won matches for India. The future looks bright for Indian cricket. pic.twitter.com/n2NlqrSIvp
— Pralhad Joshi (@JoshiPralhad) February 15, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.