ನವದೆಹಲಿ: ಭಾರತ ಮತ್ತು ಸ್ಪೇನ್ ದೇಶಗಳ ನಡುವೆ ಬೆಳೆಯುತ್ತಿರುವ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
ಅಧಿಕೃತ ಹೇಳಿಕೆಯ ಪ್ರಕಾರ, ಉಭಯ ನಾಯಕರು ಪರಸ್ಪರ ಹಿತಾಸಕ್ತಿಯ ಹಲವಾರು ದ್ವಿಪಕ್ಷೀಯ ಮತ್ತು ಅಂತರರಾಷ್ಟ್ರೀಯ ವಿಷಯಗಳ ಬಗ್ಗೆಯೂ ಚರ್ಚಿಸಿದರು.
ಪ್ರಸ್ತುತ ನಡೆಯುತ್ತಿರುವ ದ್ವಿಪಕ್ಷೀಯ ಉಪಕ್ರಮಗಳನ್ನು ಉಭಯ ನಾಯಕರು ಪರಿಶೀಲಿಸಿದ್ದಾರೆ ಮತ್ತು ಇತ್ತೀಚಿನ ಉನ್ನತ ಮಟ್ಟದ ವಿನಿಮಯ ಮತ್ತು ರಕ್ಷಣೆ, ಆರ್ಥಿಕ ಮತ್ತು ವಾಣಿಜ್ಯ ಕ್ಷೇತ್ರಗಳಲ್ಲಿ ಹೆಚ್ಚುತ್ತಿರುವ ಸಹಕಾರಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ.
ಡಿಜಿಟಲ್ ಮೂಲಸೌಕರ್ಯ, ಹವಾಮಾನ ಕ್ರಮ, ಶುದ್ಧ ಇಂಧನ ಪರಿವರ್ತನೆ ಮತ್ತು ಸುಸ್ಥಿರ ಅಭಿವೃದ್ಧಿಯಂತಹ ವಿಷಯಗಳಲ್ಲಿ ಸಹಕರಿಸಲು ಇಬ್ಬರೂ ನಾಯಕರು ಒಪ್ಪಿಕೊಂಡಿದ್ದಾರೆ ಎಂದು ಹೇಳಿಕೆ ತಿಳಿಸಿದೆ.
Glad to speak with Prime Minister of Spain @sanchezcastejon. We discussed ways to further strengthen our growing bilateral relationship. Look forward to continuing our close cooperation as part of India’s G20 Presidency. https://t.co/gwNq3UHETz
— Narendra Modi (@narendramodi) February 15, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.