ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ರಮ ಒಳನುಸುಳುವಿಕೆ ಪ್ರಯತ್ನಗಳನ್ನು ವಿಫಲಗೊಳಿಸಲು ಭಾರತೀಯ ಸೇನಾಪಡೆಗಳು ನಿರಂತರ ಕಾರ್ಯಾಚರಣೆಗಳನ್ನು ನಡೆಸುತ್ತಿವೆ. ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಅಪರಿಚಿತ ನುಸುಳುಕೋರನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ವರದಿಗಳು ತಿಳಿಸಿವೆ.
ಬುಧವಾರ ರಾತ್ರಿ, ಕುಪ್ವಾರಾ ಪೊಲೀಸರು ನೀಡಿದ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಸೇನೆ ಮತ್ತು ಪೊಲೀಸರ ಜಂಟಿ ತಂಡವು ಸೈದ್ಪೋರಾ ಫಾರ್ವರ್ಡ್ ಪ್ರದೇಶದಲ್ಲಿ ಒಳನುಸುಳುಕೋರರ ಗುಂಪನ್ನು ತಡೆದಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಭದ್ರತಾ ಪಡೆಗಳು ಜಂಟಿ ತಂಡವು ಒಬ್ಬ ನುಸುಳುಕೋರನನ್ನು ಹತ್ಯೆ ಮಾಡಿದ್ದು, ಆತನ ಗುರುತನ್ನು ಕಂಡುಹಿಡಿಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ನಡುವೆ, ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ವರದಿಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.