News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇಂದು ರಾಜ್ಯ ಬಜೆಟ್‌ ಮಂಡನೆ: ದೇಗುಲದಲ್ಲಿ ಸಿಎಂ ಪ್ರಾರ್ಥನೆ

ಬೆಂಗಳೂರು: ರಾಜ್ಯ ಬಜೆಟ್‌ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, 2023-24 ನೇ ಸಾಲಿನ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಇಂದು ಬೆಳಗ್ಗೆ ಹಸ್ತಾಂತರಿಸಿದೆ.

ಬಜೆಟ್‌ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿಯವರ ತಮ್ಮ ನಿವಾಸ ಆರ್ ಟಿ ನಗರದ ಹತ್ತಿರವಿರುವ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಆಂಜನೇಯ ದೇವಸ್ಥಾನದಲ್ಲೂ ನಾಡಿನ ಜನರ ಹೆಸರಿನಲ್ಲಿ ಪೂಜೆ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಇಡೀ ರಾಜ್ಯದ ಮಹಾಜನತೆಗೆ ಒಳ್ಳೆಯದಾಗಲಿ ಎಂದು ದೇವರ ಮುಂದೆ ಪ್ರಾರ್ಥನೆ ಸಲ್ಲಿಸಿದೆನು ಎಂದು  ತಿಳಿಸಿದರು.

ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸುತ್ತಿರುವ ಕೊನೆಯ ಬಜೆಟ್ ಇದಾಗಿದ್ದು ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಕಾರಣ ಹೆಚ್ಚಿನ ನಿರೀಕ್ಷೆಗಳು ಬಜೆಟ್‌ ಮೇಲೆ ಇದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top