ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಖೇಲೋ ಇಂಡಿಯಾ ಉಪಕ್ರಮದ ಭಾಗವಾಗಿ, ಭಾರತೀಯ ಸೇನೆಯು ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಪಂಜ್ಗಾಮ್ ಗ್ರಾಮದಲ್ಲಿ ಮಹಿಳಾ ಸ್ನೋ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿದೆ.
ರಕ್ಷಣಾ ವಕ್ತಾರರ ಪ್ರಕಾರ, ಕುಪ್ವಾರಾದಲ್ಲಿ ಇದು ಈ ರೀತಿಯ ಮೊದಲ ಕ್ರೀಡಾಕೂಟವಾಗಿದ್ದು, ಇದರಲ್ಲಿ ಯುವತಿಯರು ಹಿಮಭರಿತ ಮೈದಾನದಲ್ಲಿ ಕ್ರಿಕೆಟ್ ಆಡಿದ್ದಾರೆ, ಇದು ಸಮುದಾಯದ ಕ್ರೀಡಾ ಉತ್ಸಾಹವನ್ನು ಪ್ರದರ್ಶಿಸುತ್ತದೆ ಎಂದಿದ್ದಾರೆ.
ಯುವತಿಯರ ಉತ್ಸಾಹದಿಂದ ಆಟದಲ್ಲಿ ತೊಡಗಿದ್ದರು. ಈ ಪ್ರದೇಶದಲ್ಲಿ ಬಾಲಕಿಯರಿಗಾಗಿ ನಡೆದ ಮೊಟ್ಟಮೊದಲ ಚಳಿಗಾಲದ ಕ್ರೀಡಾ ಪಂದ್ಯಾವಳಿಯನ್ನು ವೀಕ್ಷಿಸಲು ಪ್ರದೇಶದ ಸಾರ್ವಜನಿಕ ಪ್ರತಿನಿಧಿಗಳು ಮತ್ತು ಸ್ಥಳೀಯರು ಈ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು ಎಂದಿದ್ದಾರೆ.
ಕುಪ್ವಾರದಲ್ಲಿ ಭಾರತೀಯ ಸೇನೆಯು ಆಗಾಗ ಇಂತಹ ಕಾರ್ಯಕ್ರಮಗಳನ್ನು ನಡೆಸುತ್ತಾ ಬರುತ್ತಿದ್ದು, ಇದರಲ್ಲಿ ಸ್ಥಳೀಯ ಮಹಿಳೆಯರು ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ ಎಂದು ವಕ್ತಾರರು ಹೇಳಿದ್ದಾರೆ.
ಕೌಶಲ್ಯ ಅಭಿವೃದ್ಧಿ ಕೇಂದ್ರಗಳ ಸ್ಥಾಪನೆ ಮತ್ತು ಪಠ್ಯೇತರ ಚಟುವಟಿಕೆಗಳು ಮತ್ತು ಕ್ರೀಡೆಗಳಲ್ಲಿ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಶಾಲೆಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸುವಂತಹ ಹಲವಾರು ಉಪಕ್ರಮಗಳು ಸಕಾರಾತ್ಮಕ ಬದಲಾವಣೆಯನ್ನು ತರುತ್ತಿವೆ. ಕಾಶ್ಮೀರ ಕಣಿವೆಯಲ್ಲಿ ಸ್ಥಳೀಯ ಯುವಕರಲ್ಲಿ ಕ್ರೀಡೆಯನ್ನು ಪ್ರೋತ್ಸಾಹಿಸುವಲ್ಲಿ ಭಾರತೀಯ ಸೇನೆಯು ಮಹತ್ವದ ಪಾತ್ರ ವಹಿಸಲು ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.