ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್ ನಿಧನ ಹೊಂದಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.
ಎಸ್.ಕೆ. ಭಗವಾನ್ ಪೂರ್ತಿ ಹೆಸರು ಶ್ರೀನಿವಾಸ್ ಕೃಷ್ಣ ಅಯ್ಯಂಗಾರ್ ಭಗವಾನ್. ಇವರು 1933 ರಲ್ಲಿ ಮೈಸೂರಿನಲ್ಲಿ ಜನಿಸಿದರು. ಬಾಲ್ಯದಿಂದಲೇ ನಟನೆಯಲ್ಲಿ ಆಸಕ್ತಿ ಇದ್ದ ಇವರು, ಶಾಲೆಯಲ್ಲಿ ಇರುವಾಗಲೇ ರಂಗಭೂಮಿ ಸೇರಿದರು. ಹಿರಣ್ಣಯ್ಯ ಮಿತ್ರ ಮಂಡಳಿ ಸೇರಿ ಅನೇಕ ನಾಟಕಗಳಲ್ಲಿ ನಟಿಸಿದರು.
ಜೇಡರ ಬಲೆ, ಕಸ್ತೂರಿ ನಿವಾಸ, ಎರಡು ಕನಸು , ಬಯಲುದಾರಿಯಂತಹ ಸೂಪರ್ ಹಿಟ್ ಸಿನಿಮಾಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ. ರಾಜ್ ಕುಮಾರ್ ಅವರಿಗಾಗಿ ಅತಿಹೆಚ್ಚು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ.
ವಯೋಸಹಜ ಕಾಯಿಲೆಯಿಂದ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿ ಆಗದೆ ಇಂದು ಬೆಳಗ್ಗೆ 6.15ಕ್ಕೆ ಕೊನೆಯುಸಿರೆಳೆದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.