ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವರ್ಚುವಲ್ ಆಗಿ ಉತ್ತರಾಖಂಡ್ ರೋಜ್ಗಾರ್ ಮೇಳವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮೋದಿ, ತಮ್ಮ ಸರ್ಕಾರವು ಉತ್ತರಾಖಂಡದಲ್ಲಿ ಮೂಲಸೌಕರ್ಯದಲ್ಲಿ ಹೆಚ್ಚು ಹೂಡಿಕೆ ಮಾಡುತ್ತಿದೆ, ದೂರದ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಜೀವನವನ್ನು ಸುಲಭಗೊಳಿಸಲು ಮತ್ತು ಉದ್ಯೋಗಾವಕಾಶಗಳನ್ನು ಇದು ಸೃಷ್ಟಿಸುತ್ತದೆ ಎಂದರು.
ನಿರ್ಮಾಣ, ಇಂಜಿನಿಯರಿಂಗ್ ಅಥವಾ ಕಚ್ಚಾ ವಸ್ತುಗಳ ವ್ಯಾಪಾರದ ಕಾರ್ಮಿಕರಿಗೆ ಮತ್ತು ಸಣ್ಣ ವ್ಯಾಪಾರಿಗಳಿಗೆ ಉದ್ಯೋಗಾವಕಾಶಗಳು ಹೆಚ್ಚುತ್ತಿವೆ. ಸಾರಿಗೆ ವಲಯದಲ್ಲಿ ಬೇಡಿಕೆಯ ಹೆಚ್ಚಳದೊಂದಿಗೆ, ಉತ್ತರಾಖಂಡದ ಯುವಕರು ಹೊಸ ಉದ್ಯೋಗಾವಕಾಶಗಳನ್ನು ಪಡೆಯುತ್ತಿದ್ದಾರೆ” ಎಂದು ಅವರು ಹೇಳಿದರು.
ರಾಜ್ಯ ಮತ್ತು ರಾಷ್ಟ್ರದ ನಿರ್ಮಾಣದಲ್ಲಿ ಪೂರ್ಣ ಹೃದಯದಿಂದ ಕೊಡುಗೆ ನೀಡುವಂತೆ ಪ್ರಧಾನಿ ಯುವಕರಿಗೆ ಕರೆ ನೀಡಿದರು.
ಹೊಸ ಶಿಕ್ಷಣ ನೀತಿಯು ಹೊಸ ಶತಮಾನಕ್ಕೆ ಯುವಕರನ್ನು ಉತ್ತಮ ರೀತಿಯಲ್ಲಿ ಸಿದ್ಧಪಡಿಸುವತ್ತ ಗಮನಹರಿಸಿದೆ. ನಿಮ್ಮ ಸೇವೆಗಳ ಮೂಲಕ ನೀವು ಈ ಧ್ಯೇಯೋದ್ದೇಶವನ್ನು ಮುಂದುವರಿಸಲು ಮತ್ತು ಮತ್ತಷ್ಟು ಬಲಪಡಿಸಲು ಮುಂದಾಗಬೇಕು ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.