ಬೆಂಗಳೂರು: ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ್ದಾರೆ.
ರಾಜ್ಯದಲ್ಲಿರುವ ಈಡಿಗ- ಬಿಲ್ಲವ ಸಮುದಾಯದ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಹೆಸರಿನಲ್ಲಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.
ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಬೊಮ್ಮಾಯಿ ಅವರು, ‘ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲಿದೆ’ ಎಂದು ಹೇಳಿದ್ದಾರೆ
"ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲಿದೆ." ಮುಖ್ಯಮಂತ್ರಿ @BSBommai pic.twitter.com/BmNEV2INVK
— CM of Karnataka (@CMofKarnataka) February 20, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.