ಶಿವಮೊಗ್ಗ: ಶಿವಮೊಗ್ಗದ ಸೋಗಾನೆ ಬಳಿ ನೂತನವಾಗಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣದಲ್ಲಿ ಮಂಗಳವಾರ ವಿಮಾನದ ಪರೀಕ್ಷಾರ್ಥ ಹಾರಾಟ ನಡೆಸಲಾಗಿದ್ದು, ಇದು ಯಶಸ್ವಿಯಾಗಿದೆ ಎಂದು ವರದಿಗಳು ತಿಳಿಸಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಫೆಬ್ರವರಿ 27ರಂದು ಈ ವಿಮಾನನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ.
ಭಾರತೀಯ ವಾಯುಪಡೆಯ ಪ್ರಾಯೋಗಿಕ ವಿಮಾನವು ಮಂಗಳವಾರ ವಿಮಾನ ನಿಲ್ದಾಣದಲ್ಲಿ ಪರೀಕ್ಷಾರ್ಥ ಹಾರಾಟ ನಡೆಸಿದ್ದು, ಸುರಕ್ಷಿತವಾಗಿ ಲ್ಯಾಂಡಿಂಗ್ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ವಿಮಾನ ದೆಹಲಿಯಿಂದ ಹೊರಟು 2:30ಕ್ಕೆ ಶಿವಮೊಗ್ಗದಲ್ಲಿನ ನೂತನ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಪ್ರಾಯೋಗಿಕ ವಿಮಾನ ಬರುತ್ತಿಂದತೆಯೇ ಅಲ್ಲಿನ ಜನರು ಭಾರೀ ಸಂಖ್ಯೆಯಲ್ಲಿ ನೆರೆದು ವಿಮಾನವನ್ನು ಕಣ್ತುಂಬಿಕೊಂಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರು, “ಶಿವಮೊಗ್ಗದಲ್ಲಿ ಮೊದಲ ಪ್ರಾಯೋಗಿಕ ವಿಮಾನ ಬಂದಿಳಿದಿದ್ದು, ಫೆಬ್ರವರಿ 27ರಂದು ವಿಮಾನ ನಿಲ್ದಾಣವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಬನ್ನಿ, ನಾವೆಲ್ಲರೂ ಈ ಐತಿಹಾಸಿಕ ಕ್ಷಣದಲ್ಲಿ ಭಾಗಿಗಳಾಗೋಣ” ಎಂದು ಹೇಳಿದ್ದಾರೆ.
The first trial flight lands at #Shivamogga.
Hon’ble PM Shri @narendramodi ji to inaugurate the #ShivamoggaAirport on Feb 27 by landing on this newly constructed Airport.
Come, let us all be a part of this historic moment. @JM_Scindia @AAI_Official @AmitShah@BSYBJP @BSBommai pic.twitter.com/cIcqUQtPOO
— B Y Raghavendra (@BYRBJP) February 21, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.