ನವದೆಹಲಿ: ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಅಡಿಯಲ್ಲಿ ಇದುವರೆಗೆ 33 ಕೋಟಿ 18 ಲಕ್ಷ ABHA (Ayushman Bharat Health Account) ಐಡಿಗಳನ್ನು ರಚಿಸಲಾಗಿದೆ ಮತ್ತು 23 ಕೋಟಿ 56 ಲಕ್ಷ ಆರೋಗ್ಯ ದಾಖಲೆಗಳನ್ನು ಡಿಜಿಟಲ್ ಲಿಂಕ್ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.
ಇಂದು ಟ್ವೀಟ್ ಮಾಡಿರುವ ಡಾ.ಮಾಂಡವೀಯ ಅವರು, ದೇಶದ ಡಿಜಿಟಲ್ ಆರೋಗ್ಯ ಪರಿಸರ ವ್ಯವಸ್ಥೆಯು ದಿನದಿಂದ ದಿನಕ್ಕೆ ಬಲಗೊಳ್ಳುತ್ತಿದೆ ಮತ್ತು ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಜನರಿಗೆ ಅಪಾರ ಪ್ರಯೋಜನವನ್ನು ನೀಡುತ್ತಿದೆ ಎಂದಿದ್ದಾರೆ.
ʻಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ʼ ಯೋಜನೆಯು ಡಿಜಿಟಲ್ ಆರೋಗ್ಯ ಪರಿಸರ ವ್ಯವಸ್ಥೆಯಲ್ಲಿ ಮಾಹಿತಿಯ ಪರಸ್ಪರ ವಿನಿಮಯಕ್ಕೆ ಅನುವು ಮಾಡಿಕೊಡುವ ತಡೆರಹಿತ ಆನ್ಲೈನ್ ವೇದಿಕೆಯಾಗಿದೆ.
India’s Digital Health Ecosystem is getting stronger by the day!
Under Ayushman Bharat Digital Mission, over 33.18 crore ABHA IDs created & 23.56 crore health records digitally linked.
The ABDM is benefiting the people immensely! pic.twitter.com/wuLpR6fqUd
— Dr Mansukh Mandaviya (@mansukhmandviya) February 22, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.