ನವದೆಹಲಿ: ನಾಗಾಲ್ಯಾಂಡ್ ಮತ್ತು ಮೇಘಾಲಯ ವಿಧಾನಸಭಾ ಚುನಾವಣೆಯ ಪ್ರಚಾರ ಕೊನೆಯ ಹಂತಕ್ಕೆ ಬಂದಿದೆ. ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ.
ಚುಮೌಕೆದಿಮಾ ಜಿಲ್ಲೆಯಲ್ಲಿ ಎನ್ಡಿಪಿಪಿ-ಬಿಜೆಪಿ ಮೈತ್ರಿಕೂಟದ ಜಂಟಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಇಂದು ಮಾತನಾಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಚುಮೌಕೆಡಿಮಾ ಜಿಲ್ಲೆಯ ಅಗ್ರಿ ಎಕ್ಸ್ಪೋದಲ್ಲಿ ಎನ್ಡಿಪಿಪಿ-ಬಿಜೆಪಿ ಮೈತ್ರಿಕೂಟದ ಜಂಟಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಾಗಾಲ್ಯಾಂಡ್ನಲ್ಲಿ ಇದು ಅವರ ಮೊದಲ ಸಮಾವೇಶವಾಗಿದೆ.
ಪ್ರಧಾನಿ ಮೋದಿಯವರ ಸಮಾವೇಶದದಲ್ಲಿ 20000 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರು ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಎಲ್ಲಾ ಪಕ್ಷಗಳು ಪ್ರಚಾರದ ಅಂತಿಮ ದಿನವಾದ ಇಂದು ಬಿರುಸಿನ ಪ್ರಚಾರ ನಡೆಸಲಿವೆ. ಚುಮೌಕೆಡಿಮಾದಲ್ಲಿ ಸಮಾವೇಶದ ನಂತರ ಮೋದಿ ಅವರು ಚುನಾವಣೆಗೆ ಒಳಪಡುವ ರಾಜ್ಯ ಮೇಘಾಲಯದಲ್ಲಿ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.