ನವದೆಹಲಿ: ನಾಗಾಲ್ಯಾಂಡ್ನಲ್ಲಿ ಶಾಶ್ವತವಾಗಿ ಶಾಂತಿಯನ್ನು ಸ್ಥಾಪಿಸುವುದು ತಮ್ಮ ಸರ್ಕಾರದ ಗುರಿಯಾಗಿದೆ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ
ಎನ್ಡಿಪಿಪಿ-ಬಿಜೆಪಿಗಾಗಿ ನಾಗಾಲ್ಯಾಂಡ್ನ ಚುಮೌಕೆಡಿಮಾದಲ್ಲಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ನಾಗಾಲ್ಯಾಂಡ್ಗೆ ಶಾಂತಿ, ಪ್ರಗತಿ ಮತ್ತು ಸಮೃದ್ಧಿ ತಮ್ಮ ಸರ್ಕಾರದ ಧ್ಯೇಯವಾಗಿದೆ. ಕಳೆದ 9 ವರ್ಷಗಳಲ್ಲಿ ನಾಗಾಲ್ಯಾಂಡ್ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ರಾಜ್ಯದಲ್ಲಿ ಶೇ.75ರಷ್ಟು ಬಂಡಾಯ ಪ್ರಕರಣಗಳು ಕಡಿಮೆಯಾಗಿವೆ ಎಂದರು.
ನಾಗಾಲ್ಯಾಂಡ್ನ ಅನೇಕ ಸ್ಥಳಗಳಿಂದ AFSPA ತೆಗೆದುಹಾಕಲಾಗಿದೆ ಮತ್ತು ಇಡೀ ರಾಜ್ಯದಿಂದ ಅದನ್ನು ರದ್ದುಪಡಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಪ್ರಧಾನಿ ಹೇಳಿದರು.
ಬಿಜೆಪಿ ಎಂದಿಗೂ ಪ್ರದೇಶ ಅಥವಾ ಧರ್ಮದ ಆಧಾರದ ಮೇಲೆ ಯಾರ ವಿರುದ್ಧವೂ ತಾರತಮ್ಯ ಮಾಡಿಲ್ಲ ಎಂದ ಮೋದಿ, ಪಿಎಂ ಕಿಸಾನ್ ನಿಧಿ ಅಡಿಯಲ್ಲಿ ಕೇಂದ್ರವು ನಾಗಾಲ್ಯಾಂಡ್ಗೆ 500 ಕೋಟಿ ರೂಪಾಯಿಗಳನ್ನು ನೀಡಿದೆ ಮತ್ತು 55 ಸಾವಿರ ಮನೆಗಳ ನಿರ್ಮಾಣಕ್ಕೂ ಮಂಜೂರು ಮಾಡಿದೆ ಎಂದು ಹೇಳಿದರು.
ಕೊಹಿಮಾವನ್ನು ರೈಲಿನ ಮೂಲಕ ಸಂಪರ್ಕಿಸಲಾಗುವುದು, ಇದು ರಾಜ್ಯದ ಆರ್ಥಿಕತೆಯನ್ನು ಉತ್ತೇಜಿಸುತ್ತದೆ ಎಂದರು.
ಕ್ರೀಡಾ ಕ್ಷೇತ್ರದಲ್ಲಿ ನಾಗಾ ಯುವಕರ ಕೊಡುಗೆಯನ್ನು ಶ್ಲಾಘಿಸಿದ ಪ್ರಧಾನಿ, ರಾಜ್ಯದ ಯುವಜನರ ಕಲ್ಯಾಣಕ್ಕೆ ತಮ್ಮ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಪ್ರತಿಪಾದಿಸಿದರು. ಕಾಂಗ್ರೆಸ್ ನಾಯಕರು ವೈಯಕ್ತಿಕ ಲಾಭಕ್ಕಾಗಿ ಈಶಾನ್ಯವನ್ನು ಎಟಿಎಂ ಆಗಿ ಬಳಸಿಕೊಂಡಿದ್ದಾರೆ. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ತಂತ್ರಜ್ಞಾನದ ಸಹಾಯದಿಂದ ಎಲ್ಲಾ ಭ್ರಷ್ಟ ಆಚರಣೆಗಳನ್ನು ನಿಲ್ಲಿಸಿತು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.