ಶಿವಮೊಗ್ಗ: ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣವು ವಾಣಿಜ್ಯ, ಸಂಪರ್ಕ ಮತ್ತು ಪ್ರವಾಸೋದ್ಯಮವನ್ನು ವೃದ್ಧಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಅವರ ಟ್ವೀಟ್ ಥ್ರೆಡ್ಗಳಿಗೆ ಪ್ರತಿಕ್ರಿಯಿಸಿದ ಮೋದಿ, ಈ ಪ್ರದೇಶದಲ್ಲಿ ವಿಮಾನ ನಿಲ್ದಾಣದ ಕನಸು ನನಸಾಗುತ್ತಿದೆ ಎಂದು ತಿಳಿಸಿದರು.
“ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣದ ಕನಸು ನನಸಾಗುತ್ತಿದೆ! ಶಿವಮೊಗ್ಗ ವಿಮಾನ ನಿಲ್ದಾಣವು ಕೇವಲ ವಿಮಾನ ನಿಲ್ದಾಣವಾಗದೆ ಮಲೆನಾಡು ಪ್ರದೇಶದ ಪರಿವರ್ತನೆಯ ಗೇಟ್ವೇ ಆಗಿ ತನ್ನನ್ನು ತಾನು ಸ್ಥಾಪಿಸಿಕೊಳ್ಳಲಿದೆ” ಎಂದು ಬಿ.ವೈ ರಾಘವೇಂದ್ರ ಅವರು ವಿಮಾನನಿಲ್ದಾಣದ ವಿಡಿಯೋ ಸಮೇತ ಟ್ವೀಟ್ ಮಾಡಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣವು ನಿರ್ಮಾಣ ಹಂತದಲ್ಲಿರುವ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣವಾಗಿದ್ದು, ಸೋಗಾನೆಯಲ್ಲಿ ನಿರ್ಮಿಸಲಾಗಿದೆ, ಶಿವಮೊಗ್ಗದಿಂದ 8.8 ಕಿಮೀ (5.5 ಮೈಲಿ) ಮತ್ತು ಭದ್ರಾವತಿಯಿಂದ 8.2 ಕಿಮೀ (5.1 ಮೈಲಿ) ದೂರ ಇದೆ. ಕರ್ನಾಟಕ ಸರ್ಕಾರದೊಂದಿಗೆ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ (PPP) ಅಡಿಯಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗಿದೆ.
The airport in Shivamogga will boost commerce, connectivity and enhance tourism. https://t.co/6yT84zpBaC
— Narendra Modi (@narendramodi) February 24, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.