ನವದೆಹಲಿ: ʼಅಗ್ನಿಪಥ್ʼ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಇಂದು ದೆಹಲಿ ಹೈಕೋರ್ಟ್ ವಜಾ ಮಾಡಿದ್ದು, ಯೋಜನೆಯು ರಾಷ್ಟ್ರೀಯ ಹಿತಾಸಕ್ತಿಯನ್ನು ಹೊಂದಿದೆ ಮತ್ತು ಸಶಸ್ತ್ರ ಪಡೆಗಳನ್ನು ಸುಸಜ್ಜಿತಗೊಳಿಸುವ ಉದ್ದೇಶದೊಂದಿಗೆ ಇದನ್ನು ರೂಪಿಸಲಾಗಿದೆ ಎಂದು ಹೇಳಿದೆ.
ಕಳೆದ ವರ್ಷ ಜೂನ್ನಲ್ಲಿ ಅನಾವರಣಗೊಂಡ ಅಗ್ನಿಪಥ್ ಯೋಜನೆಯು ಸಶಸ್ತ್ರ ಪಡೆಗಳಲ್ಲಿ ಯುವಕರ ನೇಮಕಾತಿಗೆ ನಿಯಮಗಳನ್ನು ರೂಪಿಸುತ್ತದೆ.
ಹದಿನೇಳುವರೆ ಮತ್ತು 21 ವರ್ಷ ವಯಸ್ಸಿನವರು ಯೋಜನೆಯಲ್ಲಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಮತ್ತು ನಾಲ್ಕು ವರ್ಷಗಳ ಅವಧಿಗೆ ಸೇನೆಗೆ ಸೇರ್ಪಡೆಯಾಗುತ್ತಾರೆ. ಯೋಜನೆಯು 25 ಪ್ರತಿಶತದಷ್ಟು ಜನರಿಗೆ ನಂತರ ನಿಯಮಿತ ಸೇವೆಗೆ ಸೇರಲು ಅನುಮತಿಸುತ್ತದೆ. ಯೋಜನೆ ಅನಾವರಣಗೊಂಡ ನಂತರ, ಯೋಜನೆಯ ವಿರುದ್ಧ ಹಲವಾರು ರಾಜ್ಯಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದವು. ಪ್ರತಿಪಕ್ಷಗಳು ಯೋಜನೆಯ ಬಗ್ಗೆ ಸುಳ್ಳು ವದಂತಿ ಹಬ್ಬಿಸಿದವು.
ಈ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಅವರ ಪೀಠವು, “ರಾಷ್ಟ್ರೀಯ ಹಿತಾಸಕ್ತಿ ಮತ್ತು ಸಶಸ್ತ್ರ ಪಡೆಗಳು ಸುಸಜ್ಜಿತವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಈ ಯೋಜನೆಯನ್ನು ಮಾಡಲಾಗಿದೆ” ಎಂದು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.