ನವದೆಹಲಿ: ಕಾಂಗ್ರೆಸ್ಗೆ ಮತ್ತೊಂದು ಕಂಟಕ ಎದುರಾಗಿದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಆಪಾದಿತರಾಗಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಜಾರಿ ನಿರ್ದೇಶನಾಲಯ ರೀ ಓಪನ್ ಮಾಡಿದೆ.
ಸೋನಿಯಾ ಮತ್ತು ರಾಹುಲ್ ವಿರುದ್ಧ ಯಾವುದೇ ದೂರು ದಾಖಲಾಗಿಲ್ಲ ಮತ್ತು ಪ್ರಕರಣದ ಆರೋಪದಲ್ಲಿ ತಾಂತ್ರಿಕ ದೋಷವಿದೆ ಎಂದು ಹೇಳಿ ಜಾರಿ ನಿರ್ದೇಶನಾಲಯ ಪ್ರಕರಣವನ್ನು ಆಗಸ್ಟ್ನಲ್ಲಿ ಕ್ಲೋಸ್ ಮಾಡಿತ್ತು.
ಪ್ರಕರಣವನ್ನು ಕ್ಲೋಸ್ ಮಾಡಿದ ಬಳಿಕ ಮೊನ್ನೆ ಮಂಗಳವಾರ ಬಿಜೆಪಿ ಸರ್ಕಾರ ಜಾರಿ ನಿರ್ದೇಶನಾಲಯ ಮುಖ್ಯಸ್ಥ ರಾಜನ್.ಎಸ್.ಕಟೋಜ್ ಅವರನ್ನು ವರ್ಗಾಯಿಸಿ ಬೃಹತ್ ಕೈಗಾರಿಕ ಕಾರ್ಯದರ್ಶಿಯನ್ನಾಗಿ ನೇಮಿಸಿತ್ತು. ಅವರ ಜಾಗಕ್ಕೆ ಹಿರಿಯ ಐಎಎಸ್ ಅಧಿಕಾರಿ ಕರ್ನಾಲ್ ಸಿಂಗ್ ಅವರನ್ನು ನೇಮಕ ಮಾಡಿತ್ತು.
ಬಿಜೆಪಿ ಹಿರಿಯ ಮುಖಂಡ ಸುಬ್ರಹ್ಮಣ್ಯ ಸ್ವಾಮಿಯವರೂ ನ್ಯಾಷನಲ್ ಹೆರಾಲ್ಡ್ ಪ್ರಕರಣ ಕ್ಲೋಸ್ ಮಾಡಿರುವುದರ ವಿರುದ್ಧ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು.
ಈ ಎಲ್ಲಾ ಬೆಳವಣಿಗೆಗಳ ಬಳಿಕ ಇದೀಗ ಜಾರಿ ನಿರ್ದೇಶನಾಳಯ ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ರೀ ಓಪನ್ ಮಾಡಿ ಕಾಂಗ್ರೆಸ್ಗೆ ದೊಡ್ಡ ತಲೆನೋವು ತಂದಿತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.