ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಪಡಗಂಪುರ ಸಮೀಪ ಮಂಗಳವಾರ ಮುಂಜಾನೆ ಆರಂಭವಾದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಪಾಕಿಸ್ಥಾನ ಬೆಂಬಲಿತ ಭಯೋತ್ಪಾದಕನನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ.
ಹತ್ಯೆಗೀಡಾದ ಭಯೋತ್ಪಾದಕನ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಎನ್ಕೌಂಟರ್ ಪ್ರಗತಿಯಲ್ಲಿದೆ,’’ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಮತ್ತು ಭದ್ರತಾ ಸೇವೆಗಳ ಜಂಟಿ ತಂಡವು ಆ ಸ್ಥಳದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡ ಬಳಿಕ ಕಾರ್ಯಾಚರಣೆ ಆರಂಭಿಸಿದವು. ಬಳಿಕ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ಪ್ರಾರಂಭವಾಯಿತು ಎಂದಿದ್ದಾರೆ.
ಭದ್ರತಾ ಸಿಬ್ಬಂದಿ ಉಗ್ರರಿದ್ದ ಪ್ರದೇಶವನ್ನು ಸುತ್ತುವರೆದಾಗ ಭಯೋತ್ಪಾದಕರು ಗುಂಡಿನ ದಾಳಿ ಆರಂಭಿಸಿದ್ದಾರೆ, ಇದರಿಂದಾಗಿ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದವು ಎಂದಿದ್ದಾರೆ.
ಭದ್ರತಾ ಪಡೆಗಳು ಇತ್ತೀಚೆಗೆ ಕಾಶ್ಮೀರದಲ್ಲಿ ಹಲವೆಡೆ ಎನ್ಕೌಂಟರ್ಗಳನ್ನು ನಡೆಸಿ ಭಯೋತ್ಪಾದಕರ ಹೆಡೆಮುರಿ ಕಟ್ಟುವ ಪ್ರಯತ್ನ ಮಾಡಿದ್ದಾರೆ. ಇಂತಹ ಎನ್ಕೌಂಟರ್ಗಳಿಂದ ಹಲವಾರು ಉಗ್ರಗಾಮಿಗಳು ಹತರಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.