ಕಠ್ಮಂಡು: ನೇಪಾಳದ ಭಾರತ ರಾಯಭಾರಿ ನವೀನ್ ಶ್ರೀವಾಸ್ತವ ಅವರು ಭಾರತ ಸರ್ಕಾರದ ಆರ್ಥಿಕ ನೆರವಿನಿಂದ ನಿರ್ಮಿಸಲಾದ ಕಠ್ಮಂಡುವಿನ ಮದನ್ ಭಂಡಾರಿ ಸ್ಮಾರಕ ಕಾಲೇಜಿನ ಕಾಲೇಜು ಕಟ್ಟಡವನ್ನು ಕಾಲೇಜು ಆಡಳಿತ ಸಮಿತಿಗೆ ಮಂಗಳವಾರ ಹಸ್ತಾಂತರಿಸಿದ್ದಾರೆ.
ನೇಪಾಳದ ಮಾಜಿ ವಿದೇಶಾಂಗ ವ್ಯವಹಾರಗಳ ಸಚಿವರಾದ ಮಹೇಂದ್ರ ಬಹದ್ದೂರ್ ಪಾಂಡೆ ಮತ್ತು ಕಾಲೇಜು ಆಡಳಿತ ಮಂಡಳಿ ಸದಸ್ಯರ ಸಮ್ಮುಖದಲ್ಲಿ ಹಸ್ತಾಂತರ ನಡೆದಿದೆ ಎಂದು ವರದಿಗಳು ತಿಳಿಸಿವೆ.
ಕಾಲೇಜು ಕಟ್ಟಡ ನಿರ್ಮಾಣ ಯೋಜನೆಯನ್ನು ‘ನೇಪಾಳ-ಭಾರತ ಅಭಿವೃದ್ಧಿ ಸಹಕಾರ’ ಅಡಿಯಲ್ಲಿ ಒಟ್ಟು 28.64 NR ಮಿಲಿಯನ್ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಭಾರತವು ನೇಪಾಳದಲ್ಲಿ ನಡೆಸುತ್ತಿರುವ ಸಮುದಾಯ ಅಭಿವೃದ್ಧಿ ಯೋಜನೆಯಡಿ ಇದು ನಿರ್ಮಾಣಗೊಂಡಿದೆ.
ಮದನ್ ಭಂಡಾರಿ ಸ್ಮಾರಕ ಕಾಲೇಜು ಗುಣಮಟ್ಟದ ಶಿಕ್ಷಣ ಮತ್ತು ಮೂಲಸೌಕರ್ಯ ಅಭಿವೃದ್ಧಿಯ ವಿಷಯದಲ್ಲಿ ಗಮನಾರ್ಹ ಯಶಸ್ಸನ್ನು ಸಾಧಿಸಿದೆ. ಈ ಕಾಲೇಜು ತ್ರಿಭುವನ್ ವಿಶ್ವವಿದ್ಯಾಲಯದೊಂದಿಗೆ ಸಂಯೋಜಿತವಾಗಿದೆ ಮತ್ತು ದೇಶದ ವಿವಿಧ ಜಿಲ್ಲೆಗಳ 1500 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದೆ ಮತ್ತು ವಿವಿಧ ಕೋರ್ಸ್ಗಳನ್ನು ನೀಡುತ್ತದೆ.
ಕಾಲೇಜು ಪ್ಲಸ್ ಟು ಮತ್ತು ಪದವಿ ಹಂತಗಳಲ್ಲಿ ವ್ಯಾಪಕ ಶ್ರೇಣಿಯ ಶೈಕ್ಷಣಿಕ ಕೋರ್ಸ್ಗಳನ್ನು ಮತ್ತು ಸಮಾಜಶಾಸ್ತ್ರ, ಇಂಗ್ಲಿಷ್ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಕೋರ್ಸ್ಗಳನ್ನು ನೀಡುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.