ನವದೆಹಲಿ: ಇಂದು ದೇಶಾದ್ಯಂತ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತಿದೆ. ಈ ವರ್ಷದ ವಿಜ್ಞಾನ ದಿನದ ಥೀಮ್ “ಜಾಗತಿಕ ಯೋಗಕ್ಷೇಮಕ್ಕಾಗಿ ಜಾಗತಿಕ ವಿಜ್ಞಾನ” ಎಂಬುದಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲಾ ವಿಜ್ಞಾನಿಗಳು ಮತ್ತು ನವೋದ್ಯಮಿಗಳಿಗೆ ವಿಜ್ಞಾನ ದಿನದ ಶುಭಾಶಯಗಳನ್ನು ತಿಳಿಸಿದ್ದಾರೆ. ಭಾರತವು ವಿಜ್ಞಾನ ಜಗತ್ತಿನಲ್ಲಿ ಅಸಂಖ್ಯಾತ ಪ್ರಗತಿಯನ್ನು ಸಾಧಿಸುತ್ತಿದೆ ಮತ್ತು ಸಂಶೋಧನೆ ಮತ್ತು ಆವಿಷ್ಕಾರಕ್ಕಾಗಿ ಪರಿಸರ ವ್ಯವಸ್ಥೆಯನ್ನು ಪೋಷಿಸುತ್ತಿದೆ ಎಂದು ಪ್ರಧಾನಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.
1928 ರಲ್ಲಿ ಈ ದಿನದಂದು ಭೌತಶಾಸ್ತ್ರಜ್ಞ ಸರ್ ಸಿವಿ ರಾಮನ್ ಅವರ “ರಾಮನ್ ಎಫೆಕ್ಟ್” ಆವಿಷ್ಕಾರವನ್ನು ಗುರುತಿಸಲು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ. ಈ ಆವಿಷ್ಕಾರಕ್ಕಾಗಿ, ಅವರಿಗೆ 1930 ರಲ್ಲಿ ಭೌತಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿಯನ್ನು ನೀಡಲಾಯಿತು. ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಿ ಅವರಿಗೆ ಗೌರವಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.