ನವದೆಹಲಿ: ಮಾರ್ಚ್ 2 ರಂದು ನಡೆಯಲಿರುವ ಜಿ 20 ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸಲು ಚೀನಾದ ವಿದೇಶಾಂಗ ಸಚಿವ ಕಿನ್ ಗ್ಯಾಂಗ್ ಈ ವಾರ ಭಾರತಕ್ಕೆ ಪ್ರಯಾಣಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಂಗಳವಾರ ಪ್ರಕಟನೆಯಲ್ಲಿ ತಿಳಿಸಿದೆ.
ಗಡಿ ಕಾರ್ಯವಿಧಾನದ ವಿಶೇಷ ಪ್ರತಿನಿಧಿಗಳ ಸಂವಾದದಲ್ಲಿ ಪಾಲ್ಗೊಳ್ಳಲು 2019 ರಲ್ಲಿ ಅಂದಿನ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಅವರು ನವದೆಹಲಿಗೆ ಭೇಟಿ ನೀಡಿದ್ದರು. ಅದಾದ ಬಳಿಕ ಚೀನಾದ ವಿದೇಶಾಂಗ ಸಚಿವರ ಭಾರತದ ಭೇಟಿ ಇದೇ ಮೊದಲು.
ಸಚಿವ ಎಸ್ ಜೈಶಂಕರ್ ಅವರ ಆಹ್ವಾನದ ಮೇರೆಗೆ, ವಿದೇಶಾಂಗ ಸಚಿವ ಕಿನ್ ಮಾರ್ಚ್ 2 ರಂದು ನವದೆಹಲಿಯಲ್ಲಿ ಜಿ 20 ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಇಲ್ಲಿ ಪ್ರಕಟಣೆ ತಿಳಿಸಿದೆ.
ಮೇ 2020 ರಲ್ಲಿ ಉಭಯ ದೇಶಗಳ ನಡುವಿನ ಪೂರ್ವ ಲಡಾಖ್ ಮಿಲಿಟರಿ ಬಿಕ್ಕಟ್ಟಿನ ನಂತರ ಎರಡೂ ದೇಶಗಳ ನಡುವಿನ ಸಂಬಂಧಗಳು ಸ್ಥಗಿತಗೊಂಡಿದ್ದವು. ಬಿಕ್ಕಟ್ಟು ಪರಿಹರಿಸಲು ಉಭಯ ದೇಶಗಳು 17 ಉನ್ನತ ಮಟ್ಟದ ಸೇನಾ ಕಮಾಂಡರ್ಗಳ ಮಾತುಕತೆ ನಡೆಸಿವೆ. ಗಡಿಯಲ್ಲಿ ಶಾಂತಿ ನೆಲೆಸದಿದ್ದರೆ ಚೀನಾ ಜತೆಗಿನ ಬಾಂಧವ್ಯ ಸಾಮಾನ್ಯವಾಗಿರಲು ಸಾಧ್ಯವಿಲ್ಲ ಎಂದು ಭಾರತ ಪ್ರತಿಪಾದಿಸುತ್ತಿದೆ. ಈ ನಡುವೆ ಚೀನಿ ಸಚಿವರ ಭಾರತ ಭೇಟಿ ಮಹತ್ವ ಪಡೆದುಕೊಂಡಿದೆ.
ಭಾರತವು ಕಳೆದ ವರ್ಷ ಡಿಸೆಂಬರ್ 1 ರಂದು G20 ನ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದೆ.
G20 ಸದಸ್ಯರು ಜಾಗತಿಕ GDP ಯ ಸುಮಾರು 85 ಪ್ರತಿಶತವನ್ನು ಪ್ರತಿನಿಧಿಸುತ್ತಾರೆ, ಜಾಗತಿಕ ವ್ಯಾಪಾರದ ಶೇಕಡಾ 75 ಕ್ಕಿಂತ ಹೆಚ್ಚು ಮತ್ತು ವಿಶ್ವದ ಜನಸಂಖ್ಯೆಯ ಸುಮಾರು ಮೂರನೇ ಎರಡರಷ್ಟು ಪ್ರತಿನಿಧಿಸುತ್ತಾರೆ.
ಸದಸ್ಯ ರಾಷ್ಟ್ರಗಳಲ್ಲಿ ಅರ್ಜೆಂಟೀನಾ, ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಚೀನಾ, ಫ್ರಾನ್ಸ್, ಜರ್ಮನಿ, ಭಾರತ, ಇಂಡೋನೇಷ್ಯಾ, ಇಟಲಿ, ಜಪಾನ್, ದಕ್ಷಿಣ ಕೊರಿಯಾ, ಮೆಕ್ಸಿಕೊ, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಟರ್ಕಿ, ಯುಕೆ ಮತ್ತು ಯುಎಸ್ಎ ಸೇರಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.