ನವದೆಹಲಿ: ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಶ್ವದ ಪ್ರಮುಖ ನಾಯಕ ಎಂದು ಅಭಿನಂದಿಸಿದ್ದಾರೆ. ಅಲ್ಲದೇ ಮೋದಿ ಜಾಗತಿಕವಾಗಿ ಅತ್ಯಂತ ಪ್ರೀತಿಪಾತ್ರ ಪ್ರಧಾನಿ ಎಂದು ಹೇಳಿದ್ದಾರೆ.
“ಪಿಎಂ ಮೋದಿ ಜಾಗತಿಕ ನಾಯಕರಲ್ಲಿ ಅತ್ಯಂತ ಪ್ರೀತಿಪಾತ್ರರಾಗಿದ್ದಾರೆ. ಅವರು ಪ್ರಮುಖ ನಾಯಕರಾಗಿದ್ದಾರೆ ಮತ್ತು ಅದಕ್ಕಾಗಿ ಅವರಿಗೆ ಅಭಿನಂದನೆಗಳು” ಎಂದಿದ್ದಾರೆ.
ನವದೆಹಲಿಯ ಹೈದರಾಬಾದ್ ಹೌಸ್ನಲ್ಲಿ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮೆಲೋನಿ ಮಾತನಾಡಿದರು.
ಇಟಲಿಯು ಭಾರತದೊಂದಿಗೆ ರಕ್ಷಣಾ ಮತ್ತು ಇಂಧನ ಭದ್ರತೆ, ಜೊತೆಗೆ ಸೈಬರ್ ಭದ್ರತೆ ಮತ್ತು ಇತರ ಕ್ಷೇತ್ರಗಳಲ್ಲಿ ತನ್ನ ಪಾಲುದಾರಿಕೆಯನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ನಮ್ಮ ಸಂಬಂಧಗಳು ತುಂಬಾ ಗಟ್ಟಿಯಾಗಿರುವುದರಿಂದ ನಾವು ಕಾರ್ಯತಂತ್ರದ ಪಾಲುದಾರರಾಗಲು ನಿರ್ಧರಿಸಿದ್ದೇವೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಮೋದಿ, ಉಕ್ರೇನ್ ವಿವಾದವನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಪರಿಹರಿಸಬಹುದು ಎಂದು ಭಾರತ ಮೊದಲಿನಿಂದಲೂ ಸ್ಪಷ್ಟಪಡಿಸಿದೆ. ಇಂಡೋ-ಪೆಸಿಫಿಕ್ ಸಾಗರಗಳ ಉಪಕ್ರಮಕ್ಕೆ ಇಟಲಿ ಸೇರಲು ನಿರ್ಧರಿಸಿರುವುದು ಸಂತಸದ ವಿಷಯ ಎಂದಿದ್ದಾರೆ.
ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದದ ವಿರುದ್ಧದ ಹೋರಾಟದಲ್ಲಿ ಭಾರತ ಮತ್ತು ಇಟಲಿ ಹೆಗಲಿಗೆ ಹೆಗಲು ಕೊಟ್ಟು ಬೆಂಬಲಿಸುತ್ತಿವೆ ಎಂದು ಅವರು ಹೇಳಿದರು.
8 ನೇ ರೈಸಿನಾ ಡೈಲಾಗ್ 2023 ರಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ಪಿಎಂ ಮೆಲೋನಿ ಗುರುವಾರ ಎರಡು ದಿನಗಳ ಭೇಟಿಗಾಗಿ ನವದೆಹಲಿಗೆ ಆಗಮಿಸಿದರು. ಅವರಿಗೆ ರಾಷ್ಟ್ರಪತಿ ಭವನದಲ್ಲಿ ಔಪಚಾರಿಕ ಸ್ವಾಗತವನ್ನು ನೀಡಲಾಯಿತು.
#WATCH | …(PM Modi) is the most loved one of all (leaders) around the world. This is really proven that he has been a major leader and congratulations for that: Italian PM Giorgia Meloni
(ANI) pic.twitter.com/3YDqzp1nxN
— Hindustan Times (@htTweets) March 2, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.