ನವದೆಹಲಿ: ದೆಹಲಿಯಲ್ಲಿ ವ್ಯಾಪಕವಾಗಿ ಡೆಂಗ್ಯೂ ರೋಗ ಹರಡುತ್ತಿರುವ ಹಿನ್ನಲೆಯಲ್ಲಿ ಟೀಕೆಗೊಳಗಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ರಾಜಕೀಯವನ್ನು ಬದಿಗೊತ್ತಿ ಎಲ್ಲಾ ವಿರೋಧ ಪಕ್ಷಗಳು ಡೆಂಗ್ಯೂ ರೋಗವನ್ನು ತಡೆಗಟ್ಟಲು ಸರ್ಕಾರದೊಂದಿಗೆ ಕೈಜೋಡಿಸಬೇಕೆಂದು ವಿನಂಬ್ರವಾಗಿ ಮನವಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ನಮ್ಮ ತಪ್ಪುಗಳನ್ನು ಎತ್ತಿ ತೋರಿಸುತ್ತಿರುವ ಎಲ್ಲಾ ಮಾಧ್ಯಮಗಳಿಗೆ ಧನ್ಯವಾದಗಳು, ಅಂತೆಯೇ ನಮ್ಮ ತಪ್ಪುಗಳನ್ನು ತಿದ್ದಿಕೊಳ್ಳುವ ಬಗೆ ಹೇಗೆ ಎಂಬ ಬಗ್ಗೆ ತುಸು ಸಲಹೆಯನ್ನೂ ನೀಡಿ’ ಎಂದಿದ್ದಾರೆ.
’ಎಲ್ಲಾ ವಿರೋಧಪಕ್ಷಗಳಿಗೂ ನಮಗೆ ಸಲಹೆ ನೀಡಿ ಎಂದು ಮನವಿ ಮಾಡಿ ಪತ್ರ ಬರೆಯುತ್ತೇನೆ ಮತ್ತು ರಾಜಕೀಯವನ್ನು ಬದಿಗೊತ್ತಿ ಡೆಂಗ್ಯೂ ತಡೆಯಲು ನಮ್ಮೊಂದಿಗೆ ಕೈಜೋಡಿಸಿ ಎಂದು ಕೇಳಿಕೊಳ್ಳುತ್ತೇನೆ’ ಎಂದಿದ್ದಾರೆ.
ದೆಹಲಿಯಲ್ಲಿ ಡೆಂಗ್ಯೂ ರೋಗಕ್ಕೆ ಇದುವರೆಗೆ 16 ಮಂದಿ ಬಲಿಯಾಗಿದ್ದು, ಒಟ್ಟು ಸಾವಿರ ಮಂದಿಯಲ್ಲಿ ಈ ರೋಗ ಪತ್ತೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.