ನವದೆಹಲಿ: ಈಶಾನ್ಯ ರಾಷ್ಟ್ರ ರಾಜಧಾನಿ ದೆಹಲಿಯಿಂದ ಅಥವಾ ನಮ್ಮ ಹೃದಯದಿಂದ ದೂರವಿಲ್ಲ ಎಂಬುದನ್ನು ವಿಧಾನಸಭಾ ಚುನಾವಣಾ ಫಲಿತಾಂಶಗಳು ಸಾಬೀತುಪಡಿಸಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಗುರುವಾರ ರಾತ್ರಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಚುನಾವಣಾ ಗೆಲುವು ಹೊಸ ಸಿದ್ಧಾಂತದ ಪ್ರತಿಫಲನವಾಗಿದೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ, ಬಡವರು ಮತ್ತು ಮಹಿಳೆಯರ ಸಬಲೀಕರಣವನ್ನು ಒಳಗೊಂಡಿರುವ ಪ್ರಧಾನಿ ಮೋದಿಯವರ ದೂರದೃಷ್ಟಿಯಿಂದಾಗಿ ವಿಧಾನಸಭೆ ಚುನಾವಣೆ ಫಲಿತಾಂಶ ಬಿಜೆಪಿ ಪರವಾಗಿ ಬಂದಿದೆ ಎಂದಿದ್ದಾರೆ.
ಇದಕ್ಕೂ ಮುನ್ನ ಸರಣಿ ಟ್ವೀಟ್ಗಳಲ್ಲಿ, ಬಿಜೆಪಿಗೆ ಮತ ಹಾಕಿದ ತ್ರಿಪುರಾದ ಜನತೆಗೆ ಪ್ರಧಾನಿ ಧನ್ಯವಾದ ಅರ್ಪಿಸಿದರು. ಇದು ಪ್ರಗತಿ ಮತ್ತು ಸ್ಥಿರತೆಯ ಮತವಾಗಿದೆ. ಬಿಜೆಪಿಯು ರಾಜ್ಯದ ಬೆಳವಣಿಗೆಯ ಪಥವನ್ನು ಹೆಚ್ಚಿಸಲು ಕಾರ್ಯ ಮಾಡುವುದನ್ನು ಮುಂದುವರೆಸಲಿದೆ. ಬಿಜೆಪಿ ಕಾರ್ಯಕರ್ತರು ತಳಮಟ್ಟದಲ್ಲಿ ಶ್ರಮಿಸುತ್ತಿರುವ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಹೇಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.