ಬೆಂಗಳೂರು: ಲೋಕಾಯುಕ್ತಕ್ಕೆ ನಮ್ಮ ಸರ್ಕಾರ ಸಂಪೂರ್ಣ ಅಧಿಕಾರ ನೀಡಿದೆ. ಎಸಿಬಿ ರಚಿಸಿ ಲೋಕಾಯುಕ್ತದ ಹಲ್ಲು ಕೀಳುವ ಪ್ರಯತ್ನವನ್ನು ನಾವು ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಕಚೇರಿ ಮತ್ತು ನಿವಾಸದ ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ನಗದು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
ಶಾಸಕರ ಪುತ್ರನ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ, ನಾವು ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ನೀಡಿದ್ದೇವೆ. ಎಸಿಬಿ ರಚಿಸಿ ಲೋಕಾಯುಕ್ತ ಹಲ್ಲು ಕೀಳುವ ಪ್ರಯತ್ನ ನಾವು ಮಾಡಿಲ್ಲ, ಅದನ್ನು ಮಾಡಿರುವುದು ಕಾಂಗ್ರೆಸ್. ಲೋಕಾಯುಕ್ತಕ್ಕೆ ಸಂಪೂರ್ಣ ಮುಕ್ತ ಅಧಿಕಾರ ನೀಡುವ ಮರು ಆದೇಶ ನೀಡಿ ಲೋಕಾಯುಕ್ತವನ್ನು ಮರುಸ್ಥಾಪಿಸಿದ್ದು ಬಿಜೆಪಿ ಸರ್ಕಾರ ಎಂದಿದ್ದಾರೆ.
ಲೋಕಾಯುಕ್ತ ಇರುವುದೇ ಭ್ರಷ್ಟಾಚಾರ ನಿಗ್ರಹಕ್ಕೆ, ಅದು ಸರ್ವಸ್ವತಂತ್ರವಾಗಿದೆ. ಲೋಕಾಯುಕ್ತ ಮುಕ್ತವಾಗಿ ಸಮಗ್ರ ತನಿಖೆ ನಡೆಸಲಿ, ಮುಕ್ತವಾಗಿ ತನಿಖೆ ನಡೆದು ಹಣ ಯಾರಿಗೆ ಸೇರಿದೆ ಎನ್ನುವ ಮಾಹಿತಿ ಹೊರಗೆ ಬರಲಿ, ಸತ್ಯ ಜನರಿಗೆ ತಿಳಿದು ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ.
ಹಿಂದೆ ಕಾಂಗ್ರೆಸ್ ಸರ್ಕಾರದ ಅಧಿಕಾರವಧಿಯಲ್ಲಿ ಇಂತಹ ಹತ್ತಾರು ಪ್ರಕರಣಗಳು ನಡೆದಿವೆ ಮತ್ತು ಅಲ್ಲಲ್ಲೇ ಮುಚ್ಚಿಹೋಗಿವೆ. ಅಂದು ಎಸಿಬಿ ರಚಿಸಿ ಇಂತಹ ಪ್ರಕರಣಗಳನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದೇ ಕಾಂಗ್ರೆಸ್ ನವರು, ಹೀಗಾಗಿ ಇಂದು ಬಿಜೆಪಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಅವರಿಗೆ ಇಲ್ಲ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.