ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಮಾತುಗಳನ್ನು ಪ್ರಯೋಗಿಸಿ ನಿಂದನೆ ಮಾಡಿದ ಆಮ್ ಆದ್ಮಿ ಪಕ್ಷದ ಆರು ನಾಯಕರ ವಿರುದ್ಧ ಉತ್ತರಪ್ರದೇಶದ ಬಲ್ಲಿಯಾದಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬಲ್ಲಿಯಾದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿಂದನಾತ್ಮಕ ಭಾಷೆ ಬಳಸಿ, ಬೆದರಿಕೆ ಮತ್ತು ಅವರ ಪ್ರತಿಕೃತಿ ದಹಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಠಾಣಾಧಿಕಾರಿ ರಾಜ್ ಕುಮಾರ್ ಸಿಂಗ್ ಈ ಬಗ್ಗೆ ಮಾಹಿತಿ ನೀಡಿ, ದೂರಿನ ಆಧಾರದ ಮೇಲೆ ಜಿಲ್ಲೆಯ ಗದ್ವಾರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ದೂರಿನ ಪ್ರಕಾರ, ಆರೋಪಿಗಳು ಗುರುವಾರ ರತ್ಸಾದ್ ಪಟ್ಟಣದ ಗಾಂಧಿ ಆಶ್ರಮ ಟ್ರಿಸೆಕ್ಷನ್ನಲ್ಲಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಬಂಧನವನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪ್ರಧಾನಿ, ಸಿಬಿಐ ಮತ್ತು ಇಡಿ ವಿರುದ್ಧ ನಿಂದನೀಯ ಪದಗಳನ್ನು ಬಳಸಿದ್ದಾರೆ, ಬೆದರಿಕೆ ಹಾಕಿದ್ದಾರೆ ಮತ್ತು ಮೋದಿ ಅವರ ಪ್ರತಿಕೃತಿಯನ್ನು ಸುಟ್ಟುಹಾಕಿದ್ದಾರೆ.
ಪೊಲೀಸರು ಸ್ಥಳದಲ್ಲೇ ಮುಖಂಡರನ್ನು ಹಿಡಿಯಲು ಪ್ರಯತ್ನಿಸಿದ್ದಾರೆ ಆದರೆ ಅವರು ಓಡಿಹೋಗಿದ್ದಾರೆ . ಅವರನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸಿಂಗ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.