News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನೈಜೀರಿಯಾ ಅಧ್ಯಕ್ಷೀಯ ಚುನಾವಣೆ ಗೆದ್ದ ಅಹ್ಮದ್ ಟಿನುಬುಗೆ ಮೋದಿ ಅಭಿನಂದನೆ

ನವದೆಹಲಿ: ನೈಜೀರಿಯಾ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದ ಬೋಲಾ ಅಹ್ಮದ್ ಟಿನುಬು ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಅಲ್ಲದೇ ಅವರ ನಾಯಕತ್ವದಲ್ಲಿ ಭಾರತ-ನೈಜೀರಿಯಾ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ.

ಟ್ವೀಟ್‌ ಮಾಡಿರುವ ಮೋದಿ, “ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕಾಗಿ ನಾನು ಹೆಚ್.ಇ ಬೋಲಾ ಅಹ್ಮದ್ ಟಿನುಬು ಅವರನ್ನು ಅಭಿನಂದಿಸುತ್ತೇನೆ. ನಿಮ್ಮ ನಾಯಕತ್ವದಲ್ಲಿ ಭಾರತ-ನೈಜೀರಿಯಾ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಎದುರುನೋಡುತ್ತೇನೆ” ಎಂದಿದ್ದಾರೆ.

ಬೋಲಾ ಟಿನುಬು ಅವರನ್ನು ಬುಧವಾರ ಮುಂಜಾನೆ ನೈಜೀರಿಯಾದಲ್ಲಿ ಅಧ್ಯಕ್ಷೀಯ ಚುನಾವಣೆಯಲ್ಲಿ ವಿಜೇತ ಎಂದು ಘೋಷಿಸಲಾಯಿತು. ಅವರ ಇಬ್ಬರು ಪ್ರಾಥಮಿಕ ಪ್ರತಿಸ್ಪರ್ಧಿಗಳಾದ ಅತಿಕು ಅಬುಬಕರ್ ಮತ್ತು ಪೀಟರ್ ಓಬಿ ಅವರು ಕಾನೂನು ಸಮರ ಸಾರಿದ ಹಿನ್ನೆಲೆಯಲ್ಲಿ ಅಂತಿಮವಾಗಿ ಇಂದು ಟಿನುಬು  ಶೇ.37 ರಷ್ಟು ಮತಗಳನ್ನು ಪಡೆದು ವಿಜಯಿ ಎಂದು ಘೋಷಿಸಲಾಯಿತು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top