News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಆರ್‌ಬಿಐನಿಂದ ಅಮೆಜಾನ್‌ ಪೇಗೆ 3.06 ಕೋಟಿ ರೂಪಾಯಿ ದಂಡ

ನವದೆಹಲಿ: ಅಮೆಜಾನ್ ಪೇ (ಇಂಡಿಯಾ) ಪ್ರೈವೇಟ್‌ಗೆ ಆರ್‌ಬಿಐ 3.06 ಕೋಟಿ ರೂಪಾಯಿಗಳ  ದಂಡವನ್ನು ವಿಧಿಸಿದೆ. ಪ್ರಿಪೇಯ್ಡ್ ಪಾವತಿ ಉಪಕರಣಗಳಿಗೆ ಮತ್ತು ನೋ ಯುವರ್‌ ಕಸ್ಟಮರ್‌ (KYC) ಗೆ ಸಂಬಂಧಿಸಿದ ಕೆಲವು ನಿರ್ದೇಶನಗಳನ್ನು ಅನುಸರಿಸದಿದ್ದಕ್ಕಾಗಿ ದಂಡವನ್ನು ವಿಧಿಸಲಾಗಿದೆ.

ಆರ್‌ಬಿಐ ಮೊದಲು ಅಮೆಜಾನ್‌ ಪೇಗೆ ನೋಟಿಸ್ ನೀಡಿದ್ದು, ಸಂಸ್ಥೆಯ ಪ್ರತಿಕ್ರಿಯೆಯನ್ನು ಪರಿಗಣಿಸಿದ ನಂತರ ದಂಡವನ್ನು ವಿಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಪತ್ರಿಕಾ ಪ್ರಕಟಣೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಆರ್‌ಬಿಐ, ಈ ಕ್ರಮವು ನಿಯಂತ್ರಕ ಅನುಸರಣೆಯಲ್ಲಿನ ನ್ಯೂನತೆಗಳನ್ನು ಆಧರಿಸಿದೆ ಮತ್ತು ತನ್ನ ಗ್ರಾಹಕರೊಂದಿಗೆ ಸಂಸ್ಥೆ ಮಾಡಿಕೊಂಡಿರುವ ಯಾವುದೇ ವಹಿವಾಟು ಅಥವಾ ಒಪ್ಪಂದದ ಸಿಂಧುತ್ವದ ಮೇಲೆ ಆಧರಿಸಿಲ್ಲ ಎಂದು ಹೇಳಿದೆ.

ಪಾವತಿ ಮತ್ತು ಸೆಟಲ್ಮೆಂಟ್ ಸಿಸ್ಟಮ್ಸ್ ಆಕ್ಟ್, 2007 ರ ಸೆಕ್ಷನ್ 30 ರ ಅಡಿಯಲ್ಲಿ  ದಂಡವನ್ನು ವಿಧಿಸಲಾಗಿದೆ.

KYC ಅವಶ್ಯಕತೆಗಳ ಕುರಿತು ಆರ್‌ಬಿಐ ಹೊರಡಿಸಿದ ನಿರ್ದೇಶನಗಳನ್ನು ಸಂಸ್ಥೆ ಅನುಸರಿಸದಿರುವುದನ್ನು ಗಮನಿಸಲಾಗಿದೆ ಎಂದು ಪ್ರಕಟನೆ ಹೇಳಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top