News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೋದಿ ಭೇಟಿಯಾದ ಬಿಲ್‌ ಗೇಟ್ಸ್: ಹಲವು ವಿಷಯಗಳ ಬಗ್ಗೆ ಚರ್ಚೆ

ನವದೆಹಲಿ: ಮೈಕ್ರೋಸಾಫ್ಟ್‌ ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಆರೋಗ್ಯ, ಹವಾಮಾನ ಬದಲಾವಣೆ ಮತ್ತು ಇತರ ನಿರ್ಣಾಯಕ ಕ್ಷೇತ್ರಗಳಲ್ಲಿ ನಡೆಯುತ್ತಿರುವ ನವೀನ ಕೆಲಸಗಳ ಕುರಿತು ಸುದೀರ್ಘವಾಗಿ ಚರ್ಚಿಸಿದ್ದಾರೆ.

ಭಾರತದಲ್ಲಿ ಅಭಿವೃದ್ಧಿ ಹೊಂದಿದ ಆವಿಷ್ಕಾರಗಳು ಜಗತ್ತಿಗೆ ಹೇಗೆ ಪ್ರಯೋಜನವನ್ನು ನೀಡುತ್ತವೆ ಮತ್ತು  ಇತರ ದೇಶಗಳು ಅವುಗಳನ್ನು ಅಳವಡಿಸಿಕೊಳ್ಳಲು ಸಹಾಯ ಮಾಡಲು ಭಾರತದ G20 ಅಧ್ಯಕ್ಷತೆ ಒಂದು ಅವಕಾಶವಾಗಿದೆ ಎಂದು ಗೇಟ್ಸ್‌ ಹೇಳಿದ್ದಾರೆ.

ತಮ್ಮ ಅಧಿಕೃತ ಬ್ಲಾಗ್‌ನಲ್ಲಿ ಸಾಂಕ್ರಾಮಿಕ ರೋಗವನ್ನು ಉಲ್ಲೇಖಿಸಿರುವ ಗೇಟ್ಸ್ , ಕೋವಿಡ್ -19 ಲಸಿಕೆಗಳನ್ನು ಅಭಿವೃದ್ಧಿಪಡಿಸಲು ಮತ್ತು ಭಾರತದ ಆರೋಗ್ಯ ವ್ಯವಸ್ಥೆಗಳಲ್ಲಿ ಹೂಡಿಕೆ ಮಾಡಲು ಪ್ರಧಾನಿ ಮೋದಿ ಅವರೊಂದಿಗೆ ಸಂಪರ್ಕದಲ್ಲಿರುವುದಾಗಿ ಎಂದು ಹೇಳಿದರು.

“ಭಾರತವು ಸಾಕಷ್ಟು ಸುರಕ್ಷಿತ, ಪರಿಣಾಮಕಾರಿ ಮತ್ತು ಕೈಗೆಟುಕುವ ಲಸಿಕೆಗಳನ್ನು ತಯಾರಿಸುವ ಅದ್ಭುತ ಸಾಮರ್ಥ್ಯವನ್ನು ಹೊಂದಿದೆ, ಅವುಗಳಲ್ಲಿ ಕೆಲವು ಗೇಟ್ಸ್ ಫೌಂಡೇಶನ್‌ನಿಂದ ಬೆಂಬಲಿತವಾಗಿದೆ. ಭಾರತದಲ್ಲಿ ತಯಾರಿಸಿದ ಲಸಿಕೆಗಳು ಸಾಂಕ್ರಾಮಿಕ ಸಮಯದಲ್ಲಿ ಲಕ್ಷಾಂತರ ಜೀವಗಳನ್ನು ಉಳಿಸಿವೆ ಮತ್ತು ಪ್ರಪಂಚದಾದ್ಯಂತ ಇತರ ರೋಗಗಳನ್ನು ತಡೆಗಟ್ಟಿವೆ” ಎಂದು ಗೇಟ್ಸ್ ಅವರ ಬ್ಲಾಗ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top