News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇಂದಿನಿಂದ ಆರಂಭವಾಗುತ್ತಿದೆ ವುಮೆನ್ಸ್‌ ಪ್ರೀಮಿಯರ್‌ ಲೀಗ್‌

ಮುಂಬಯಿ: ನವಿ ಮುಂಬೈನಲ್ಲಿ ಐದು ತಂಡಗಳ ಮಹಿಳಾ ಪ್ರೀಮಿಯರ್ ಲೀಗ್ (WPL 2023) ಆರಂಭವಾಗುವ ಮೂಲಕ ಇಂದು ಇತಿಹಾಸ ನಿರ್ಮಾಣವಾಗಲಿದೆ

ಬಹು ವರ್ಷಗಳ ಕಾಯುವಿಕೆ ಮತ್ತು ಯೋಜನೆಯ ನಂತರ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅಂತಿಮವಾಗಿ ಜನಪ್ರಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನ ಮಹಿಳಾ ಆವೃತ್ತಿಯನ್ನು ಆರಂಭಿಸಿದೆ. ಈ ಮೂಲಕ ದೇಶದಲ್ಲಿ ಮಹಿಳಾ ಕ್ರಿಕೆಟ್‌ಗೆ ಹೊಸ ಉತ್ತೇಜನವನ್ನು ನೀಡಲು ಮುಂದಾಗಿದೆ.

WPL (ವುಮೆನ್ಸ್‌ ಪ್ರೀಮಿಯರ್‌ ಲೀಗ್)ನ ಉದ್ಘಾಟನಾ ಆವೃತ್ತಿಯಲ್ಲಿ ಭಾಗವಹಿಸುವ ಐದು ತಂಡಗಳೆಂದರೆ ಮುಂಬೈ ಇಂಡಿಯನ್ಸ್ (MI), ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ದೆಹಲಿ ಕ್ಯಾಪಿಟಲ್ಸ್ (DC), ಯುಪಿ ವಾರಿಯರ್ಸ್ (UPW) ಮತ್ತು ಗುಜರಾತ್ ಜೈಂಟ್ಸ್ (GG). ‌

ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರನ್ನು ಮುಂಬೈ ಇಂಡಿಯನ್ಸ್ ನಾಯಕಿಯಾಗಿ ನೇಮಿಸಲಾಗಿದ್ದು,‌ ಭಾರತೀಯ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಆರ್‌ಸಿಬಿ ಮಹಿಳಾ ತಂಡವನ್ನು ಮುನ್ನಡೆಸಲಿದ್ದಾರೆ. ಆಸ್ಟ್ರೇಲಿಯಾದ ಯಶಸ್ವಿ ನಾಯಕಿ ಮೆಗ್ ಲ್ಯಾನಿಂಗ್ ಡೆಲ್ಲಿ ಕ್ಯಾಪಿಟಲ್ಸ್‌ನ ಚುಕ್ಕಾಣಿ ಹಿಡಿದಿದ್ದರೆ, ಬೆತ್ ಮೂನಿ ಗುಜರಾತ್ ಜೈಂಟ್ಸ್‌ಗೆ ನಾಯಕಿಯಾಗಿ ನೇಮಕಗೊಂಡಿದ್ದಾರೆ. ಆಸ್ಟ್ರೇಲಿಯನ್ ವಿಕೆಟ್ ಕೀಪರ್ ಮತ್ತು ಬ್ಯಾಟರ್ ಅಲಿಸ್ಸಾ ಹೀಲಿ ಯುಪಿ ವಾರಿಯರ್ಸ್ ಅನ್ನು ಮುನ್ನಡೆಸುತ್ತಿದ್ದಾರೆ.

ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವಿನ ಮೊದಲ ಪಂದ್ಯವು ಇಂದು ರಾತ್ರಿ 7.30 ಕ್ಕೆ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಟೂರ್ನಮೆಂಟ್ ಫೈನಲ್ ಮಾರ್ಚ್ 26 ರಂದು ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯಲಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top