News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಯುವ ಉತ್ಸವ – ಭಾರತ@2047 ಗೆ ಚಾಲನೆ ನೀಡಿದ ಅನುರಾಗ್‌ ಠಾಕೂರ್

ನವದೆಹಲಿ: ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಇಂದು  ಪಂಜಾಬ್‌ನ ರೋಪರ್‌ನಿಂದ 4ನೇ ಯುವ ಉತ್ಸವ – ಭಾರತ@2047 ಗೆ ಚಾಲನೆ ನೀಡಿದ್ದಾರೆ. ಅಲ್ಲದೇ ಈ ವೇಳೆ ಅವರು ಯುವ ಉತ್ಸವದ ಡ್ಯಾಶ್‌ಬೋರ್ಡ್ ಅನ್ನು ಸಹ ಪ್ರಾರಂಭಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಾರ್ಚ್ 31 ರವರೆಗೆ ಯುವ ಶಕ್ತಿಯನ್ನು ಉತ್ತೇಜಿಸಲು ಮೊದಲ ಹಂತದಲ್ಲಿ ದೇಶದ 150 ಜಿಲ್ಲೆಗಳಲ್ಲಿ ಯುವ ಉತ್ಸವವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಮೊದಲ ಹಂತದಲ್ಲಿ ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದಿದ್ದಾರೆ.

ದೇಶ ಆಜಾದಿ ಕಾ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ಅಪಾರ ಕೊಡುಗೆ ನೀಡಿದ ಪಂಜಾಬ್‌ನಿಂದ ಯುವ ಉತ್ಸವ ಆರಂಭವಾಗಿರುವುದು ಹೆಮ್ಮೆಯ ಸಂಗತಿ ಎಂದರು.

ಭಾರತವು 35 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅತಿದೊಡ್ಡ ಜನಸಂಖ್ಯೆಯನ್ನು ಹೊಂದಿರುವುದರಿಂದ ನಮ್ಮ ದೇಶದ ಅಭಿವೃದ್ಧಿ, ಪರಂಪರೆ ಮತ್ತು ಮೌಲ್ಯಗಳನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ದೇಶದ ಯುವಕರು ಕೊಡುಗೆ ನೀಡಬೇಕು ಎಂದ ಅವರು, ಭಾರತವು ಪ್ರಜಾಪ್ರಭುತ್ವದ ತಾಯಿ ಮತ್ತು ದೊಡ್ಡ ಯುವ ಶಕ್ತಿಯನ್ನು ಹೊಂದಿದೆ ಎಂದು ಅವರು ಹೇಳಿದರು.

ಜನಭಾಗಿದಾರಿಯಲ್ಲಿ ಯುವಶಕ್ತಿಯಿಂದ ಸಾಕಷ್ಟು ನಿರೀಕ್ಷೆಗಳಿವೆ. ಯುವಕರು ನಾಳಿನ ನಿರ್ಮಾತೃಗಳು, ಯುವಕರು ದೇಶ ಕಟ್ಟುವ ಕೆಲಸ ಮಾಡಬೇಕು ಮತ್ತು ಯಾವುದೇ ಕ್ಷೇತ್ರದಲ್ಲಿ ಬದಲಾವಣೆ ತರಬೇಕು ಎಂದು ಕರೆ ನೀಡಿದರು.

ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ತನ್ನ ಪ್ರಮುಖ ಯುವ ಸಂಘಟನೆ ನೆಹರು ಯುವ ಕೇಂದ್ರ ಸಂಘಟನೆಯ ಮೂಲಕ ದೇಶದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ‘ಯುವ ಉತ್ಸವ ಭಾರತ @2047’ ಅನ್ನು ನಡೆಸುತ್ತಿದೆ. ಯುವ ಉತ್ಸವವು ಮಾರ್ಚ್‌ನಿಂದ ಜೂನ್ 2023 ರವರೆಗೆ ನಡೆಯಲಿದೆ. ಯುವ ಶಕ್ತಿಯ ಈ ಅಖಿಲ ಭಾರತ ಆಚರಣೆ ಮೂರು ಹಂತಗಳಲ್ಲಿ ನಡೆಯಲಿದೆ. ಯುವ ಉತ್ಸವವು ಒಂದು ದಿನದ ಜಿಲ್ಲಾ ಮಟ್ಟದ ಕಾರ್ಯಕ್ರಮದೊಂದಿಗೆ ಪ್ರಾರಂಭವಾಗುತ್ತದೆ. ಮೊದಲ ಹಂತದ ಕಾರ್ಯಕ್ರಮವನ್ನು 150 ಜಿಲ್ಲೆಗಳಲ್ಲಿ ಮಾರ್ಚ್ 4 ರಿಂದ 31 ರವರೆಗೆ ನಡೆಸಲು ಯೋಜಿಸಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top