News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭಾರತೀಯ ನ್ಯಾಯಾಂಗ ಶೀಘ್ರದಲ್ಲೇ ಕಾಗದ ರಹಿತವಾಗಲಿದೆ: ರಿಜ್ಜು

ನವದೆಹಲಿ: ಭಾರತೀಯ ನ್ಯಾಯಾಂಗ ಶೀಘ್ರದಲ್ಲೇ ಕಾಗದ ರಹಿತವಾಗಲಿದೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

ಇಂದು ಒಡಿಶಾದ ಭುವನೇಶ್ವರದಲ್ಲಿ ಭಾರತದ ಪೂರ್ವ ರಾಜ್ಯಗಳ ಕೇಂದ್ರ ಸರ್ಕಾರದ ವಕೀಲರ 1 ನೇ ಸಮ್ಮೇಳನದಲ್ಲಿ ತಮ್ಮ ಉದ್ಘಾಟನಾ ಭಾಷಣವನ್ನು ಮಾಡಿದ ಸಚಿವರು, ನ್ಯಾಯ ವಿತರಣೆ ಯಾಂತ್ರಿಕ ವ್ಯವಸ್ಥೆಯನ್ನು ಡಿಜಿಟಲೀಕರಣಗೊಳಿಸುವ ಉದ್ದೇಶದಿಂದ ಇ-ಕೋರ್ಟ್ ಯೋಜನೆಯ ಹಂತ-III ಈಗಾಗಲೇ ಪ್ರಾರಂಭವಾಗಿದೆ ಎಂದು ಹೇಳಿದರು.

ದೇಶದ ವಿವಿಧ ಭಾಗಗಳಿಂದ ಬರುತ್ತಿರುವ ಹೈಕೋರ್ಟ್‌ಗಳ ಪ್ರತ್ಯೇಕ ಪೀಠಗಳ ಸ್ಥಾಪನೆಯ ಬೇಡಿಕೆಗಳಿಗೆ ಇದು ಪರಿಹಾರವನ್ನು ನೀಡುತ್ತದೆ ಎಂದು ಅವರು ಹೇಳಿದರು.

ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಸುಮಾರು 4 ಕೋಟಿಗೂ ಅಧಿಕ ಪ್ರಕರಣಗಳಲ್ಲಿ ಸಿಂಹಪಾಲನ್ನು ದೇಶದ ಕೆಳ ನ್ಯಾಯಾಲಯಗಳು ನಿರ್ವಹಿಸುತ್ತಿವೆ. ಇವು ಎದುರಿಸುತ್ತಿರುವ ಸವಾಲುಗಳ ಬಗ್ಗೆ ವಿಶೇಷ ಗಮನ ಹರಿಸಬೇಕು. ಸ್ಥಳೀಯ ನ್ಯಾಯಾಲಯಗಳಲ್ಲಿ ಮತ್ತು ಉಚ್ಚ ನ್ಯಾಯಾಲಯಗಳಲ್ಲಿ ಸಹ ಆಯಾ ಮಾತೃಭಾಷೆಗಳನ್ನು ಪರಿಚಯಿಸುವ ಮೂಲಕ ನ್ಯಾಯದ ಸುಲಭತೆಯನ್ನು ಖಚಿತಪಡಿಸಿಕೊಳ್ಳುವ ಅಗತ್ಯವಿದೆ ಎಂದು ಅವರು ಹೇಳಿದರು.

ಸರ್ಕಾರವು ಈಗಾಗಲೇ 1486 ಅನಗತ್ಯ ಕಾನೂನುಗಳನ್ನು ರದ್ದುಗೊಳಿಸಿದೆ. ಇನ್ನೂ 65 ಕಾಯಿದೆಗಳನ್ನು ಸಂಸತ್ತಿನ ಪ್ರಸಕ್ತ ಬಜೆಟ್ ಅಧಿವೇಶನದಲ್ಲಿಯೇ ರದ್ದುಗೊಳಿಸಲು ಪ್ರಸ್ತಾಪಿಸಲಾಗಿದೆ.

ಭಾರತೀಯ ನ್ಯಾಯಾಂಗ ಸೇರಿದಂತೆ ಭಾರತದ ಪ್ರಜಾಪ್ರಭುತ್ವವನ್ನು ಕೆಣಕಲು ಪ್ರಯತ್ನಿಸುತ್ತಿರುವವರ ವಿರುದ್ಧ ವಾಗ್ದಾಳಿ ನಡೆಸಿದ ರಿಜಿಜು,  ನ್ಯಾಯಾಂಗವು ಅಂತಹ ಜನರ ದುರುದ್ದೇಶವನ್ನು ಪೂರೈಸಲು ಎಂದಿಗೂ ವಿರೋಧ ಪಕ್ಷದ ಪಾತ್ರವನ್ನು ವಹಿಸುವುದಿಲ್ಲ ಎಂದು ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top