News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ತ್ರಿಪುರಾ, ನಾಗಾಲ್ಯಾಂಡ್‌, ಮೇಘಾಲಯ ಸಿಎಂಗಳ ಪ್ರಮಾಣವಚನದಲ್ಲಿ ಭಾಗಿಯಾಗಲಿದ್ದಾರೆ ಮೋದಿ

ನವದೆಹಲಿ: ನೂತನವಾಗಿ ಸರ್ಕಾರ ರಚಿಸಲಿರುವ ಮೂರು ಈಶಾನ್ಯ ರಾಜ್ಯಗಳಾದ ನಾಗಾಲ್ಯಾಂಡ್‌, ತ್ರಿಪುರಾ, ಮೇಘಾಲಯದಲ್ಲಿ ಮುಖ್ಯಮಂತ್ರಿಗಳು ಮತ್ತು ಇತರ ನಾಯಕರ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.

ಮಾರ್ಚ್ 7 ರಂದು ನಾಗಾಲ್ಯಾಂಡ್ ಮತ್ತು ಮೇಘಾಲಯದಲ್ಲಿ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) ಸರ್ಕಾರಗಳ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಮರುದಿನ ಅವರು ತ್ರಿಪುರಾದಲ್ಲಿ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂರು ಈಶಾನ್ಯ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಉತ್ತಮ ಪ್ರದರ್ಶನವು ಪ್ರಜಾಪ್ರಭುತ್ವ ಮತ್ತು ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಜನರ ದೃಢವಾದ ನಂಬಿಕೆಯನ್ನು ತೋರಿಸುತ್ತದೆ ಎಂದು ಮೂರು ರಾಜ್ಯಗಳ ಚುನಾವಣಾ ಫಲಿತಾಂಶಗಳು ಪ್ರಕಟವಾದ ಮಾರ್ಚ್ 2 ರಂದು ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಪ್ರಧಾನಿ ಮೋದಿ ಹೇಳಿದ್ದರು.

ತ್ರಿಪುರಾದಲ್ಲಿ ಬಿಜೆಪಿ ಬಹಮತದೊಂದಿಗೆ ಮತ್ತೊಂದು ಬಾರಿ ಗೆದ್ದಿದೆ. ಇನ್ನು ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿಯೊಂದಿಗೆ ಸೇರಿ ನಾಗಾಲ್ಯಾಂಡ್‌ನಲ್ಲಿ ಸರ್ಕಾರವನ್ನು ರಚಿಸಲಿದೆ. ಮೇಘಾಲಯದಲ್ಲಿ ನ್ಯಾಶನಲ್ ಪೀಪಲ್ಸ್ ಪಾರ್ಟಿಗೆ ಸರ್ಕಾರ ರಚಿಸಲು ಬಿಜೆಪಿ ಬೆಂಬಲ ನೀಡಲಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top