News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ʼಉದ್ಯೋಗಕ್ಕಾಗಿ ಭೂಮಿ ಹಗರಣʼ: ಪಾಟ್ನಾದಲ್ಲಿ ಸಿಬಿಐನಿಂದ ರಾಬ್ರಿ ದೇವಿ ವಿಚಾರಣೆ

ಪಾಟ್ನಾ: ʼಉದ್ಯೋಗಕ್ಕಾಗಿ ಭೂಮಿʼ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರನ್ನು ಪಾಟ್ನಾದ ಅವರ ನಿವಾಸದಲ್ಲಿ ವಿಚಾರಣೆಗೆ ಒಳಪಡಿಸಿದ್ದಾರೆ.

ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದ್ದು, ಇದು ದಾಳಿ ಅಥವಾ ಶೋಧವಲ್ಲ ಎಂದು ಸಿಬಿಐ ಮೂಲಗಳು ತಿಳಿಸಿವೆ.

ಉದ್ಯೋಗಕ್ಕಾಗಿ ಭೂಮಿ ಪ್ರಕರಣದಲ್ಲಿ ಲಾಲೂ ಪ್ರಸಾದ್ ಯಾದವ್, ರಾಬ್ರಿ ದೇವಿ, ಅವರ ಪುತ್ರಿಯರಾದ ಮಿಸಾ ಮತ್ತು ಹೇಮಾ ಸೇರಿದಂತೆ ಇತರರ ಹೆಸರು ಕೂಡ ಇದೆ. ಮೇ 2022 ರಲ್ಲಿ ದಾಖಲಾದ ಎಫ್‌ಐಆರ್ ಪ್ರಕಾರ, 2004-2009 ರ ಅವಧಿಯಲ್ಲಿ ಲಾಲೂ ಕೇಂದ್ರ ರೈಲ್ವೇ ಸಚಿವರಾಗಿದ್ದ ಅವಧಿಯಲ್ಲಿ ಉದ್ಯೋಗಗಳನ್ನು ನೀಡಿ  ಯಾದವ್ ಮತ್ತು ಅವರ ಕುಟುಂಬ ಸದಸ್ಯರು ಕಡಿಮೆ ದರದಲ್ಲಿ ಲಂಚವಾಗಿ ಭೂಮಿಯನ್ನು ಪಡೆದುಕೊಳ್ಳುತ್ತಿದ್ದರು ಎಂದು ಆರೋಪಿಸಲಾಗಿದೆ

ಲಾಲೂ, ಅವರ ಪತ್ನಿ ಮತ್ತು ಅವರ ಪುತ್ರಿಯರಲ್ಲದೆ, ಎಫ್‌ಐಆರ್‌ನಲ್ಲಿ ಭೂಮಿಗೆ ಬದಲಾಗಿ ಉದ್ಯೋಗ ಪಡೆದ 12 ಜನರನ್ನು ಕೂಡ ಹೆಸರಿಸಲಾಗಿದೆ. ಕಳೆದ ವರ್ಷ ಜುಲೈನಲ್ಲಿ,  ಯಾದವ್ ಅವರ ಸಹಾಯಕ ಮತ್ತು ವಿಶೇಷ ಕರ್ತವ್ಯದ ಮಾಜಿ ಅಧಿಕಾರಿ (OSD) ಭೋಲಾ ಯಾದವ್ ಅವರನ್ನು ಈ ಪ್ರಕರಣದಲ್ಲಿ ಸಿಬಿಐ ಬಂಧಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಯಾದವ್‌ ಕುಟುಂಬ ಮತ್ತು ಇತರ ಆರೋಪಿಗಳು ದೆಹಲಿ ನ್ಯಾಯಾಲಯಕ್ಕೆ ಹಾಜರಾಗಲು ಗಡುವು ನೀಡಿದ ಒಂದು ವಾರದ ಮೊದಲು ರಾಬ್ರಿ ದೇವಿ ಅವರ ವಿಚಾರಣೆ ನಡೆದಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top