ಟೆಹ್ರಾನ್: ಈಗಾಗಲೇ ಹಿಜಾಬ್ ವಿರೋಧಿ ಪ್ರತಿಭಟನೆಗಳಿಂದ ಅಂತಾರಾಷ್ಟ್ರೀಯ ಗಮನವನ್ನು ಸೆಳೆದಿರುವ ಇರಾನಿನಲ್ಲಿ ಮತ್ತೊಂದು ಆಘಾತಕಾರಿಯಾದ ಘಟನೆ ನಡೆದಿದೆ. ಶಾಲಾ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ವಿಷಾನಿಲ ಹರಡಲಾಗಿದೆ ಎಂದು ವರದಿಗಳು ಹೇಳುತ್ತಿವೆ.
ಶಂಕಿತ ವಿಷ ಸೇವನೆಯಿಂದ ಸುಮಾರು 700 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ಆದರೆ ಯಾರೂ ಸಾವನ್ನಪ್ಪಿಲ್ಲ ಎಂದು ಹೇಳಲಾಗಿದೆ. ಸುಮಾರು 50 ಶಾಲೆಗಳು ದಾಳಿಗೊಳಗಾಗಿವೆ ಎಂದು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಹಲವು ತಿಂಗಳುಗಳಿಂದ ಅಶಾಂತಿಯನ್ನು ಎದುರಿಸುತ್ತಿರುವ ಇರಾನಿನಲ್ಲಿ ಇಂತಹ ಘಟನೆ ನಡೆದಿರುವುದು ಅಲ್ಲಿನ ಪೋಷಕರನ್ನು ಆತಂಕಕ್ಕೆ ದೂಡಿದೆ.
ಬಿಬಿಸಿ ವರದಿಯ ಪ್ರಕಾರ, ನವೆಂಬರ್ನಿಂದ ಇರಾನ್ನಲ್ಲಿ ಸುಮಾರು 700 ಹುಡುಗಿಯರು ವಿಷಕಾರಿ ಅನಿಲದಿಂದ ವಿಷಪೂರಿತರಾಗಿದ್ದಾರೆ. ಹೆಣ್ಣು ಮಕ್ಕಳ ಶಾಲೆಗಳನ್ನು ಮುಚ್ಚಲು ಉದ್ದೇಶಪೂರ್ವಕವಾಗಿ ಇಂತಹ ಕೃತ್ಯಗಳನ್ನು ನಡೆಸಲಾಗುತ್ತಿದೆ ಎಂದು ಹಲವರು ನಂಬಿದ್ದಾರೆ. ಯಾವುದೇ ಹುಡುಗಿಯರು ಘಟನೆಯಲ್ಲಿ ಸಾವನ್ನಪ್ಪಿಲ್ಲ, ಆದರೆ ಅನೇಕರು ಉಸಿರಾಟದ ತೊಂದರೆ, ವಾಕರಿಕೆ, ತಲೆತಿರುಗುವಿಕೆ ಮತ್ತು ಆಯಾಸದಿಂದ ಬಳಲುತ್ತಿದ್ದಾರೆ. ಇಂತಹ ಘಟನೆಗಳಿಗೆ ಯಾರು ಹೊಣೆ ಎಂಬುದು ಸ್ಪಷ್ಟವಾಗಿಲ್ಲ. ಇರಾನ್ನ 30 ಪ್ರಾಂತ್ಯಗಳಲ್ಲಿ 50 ಶಾಲೆಗಳು ಶಂಕಿತ ಪ್ರಕರಣಗಳನ್ನು ಕಂಡಿವೆ ಎಂದಿದೆ.
1979 ರ ಇಸ್ಲಾಮಿಕ್ ಕ್ರಾಂತಿಯ ನಂತರ ಅಲ್ಲಿ ಕಳೆದ 40 ವರ್ಷಗಳಿಂದ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಯಾವುದೇ ಅಡ್ಡಿ ಉಂಟಾಗಿಲ್ಲ. ಈ ನಡುವೆ ಹುಡುಗಿಯರು ಮತ್ತು ಮಹಿಳೆಯರಿಗೆ ಶಾಲೆ ಮತ್ತು ವಿಶ್ವವಿದ್ಯಾಲಯಗಳಿಗೆ ಮರಳಲು ಅವಕಾಶ ನೀಡುವಂತೆ ಇರಾನ್ ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರಕ್ಕೆ ಕರೆ ನೀಡುತ್ತಿದೆ. ಇಂತಹ ಸಂದರ್ಭದಲ್ಲಿ ಅಲ್ಲಿ ಕೆಲವು ಮೂಲಭೂತವಾದಿಗಳು ವಾಮ ಮಾರ್ಗದ ಮೂಲ ಹೆಣ್ಣು ಮಕ್ಕಳ ಶೀಕ್ಷಣಕ್ಕೆ ಅಡ್ಡಿ ತರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
Islamofascists in Iran are arresting the school girls who were poisoned by the Islamofascists.
IR: We poison you then we arrest you & the world doesn't take strong actions so we do it again, again, and again. #SaveIranianSchoolGirls#IranRevoIution
pic.twitter.com/uI50upsuh4— Mooniter (@Mooniter) March 4, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.