News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

2023 ರ ಪ್ರಧಾನಮಂತ್ರಿಗಳ‌ ಯೋಗ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ನವದೆಹಲಿ: ಆಯುಷ್ ಸಚಿವಾಲಯವು 2023 ರ ಪ್ರಧಾನಮಂತ್ರಿಗಳ‌ ಯೋಗ ಪ್ರಶಸ್ತಿಗಳಿಗೆ ಅರ್ಜಿಗಳನ್ನು ಅಥವಾ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ.

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಯೋಗದ ಅಭಿವೃದ್ಧಿ ಮತ್ತು ಪ್ರಚಾರದ ಕಡೆಗೆ ವ್ಯಕ್ತಿಗಳ ಅನುಕರಣೀಯ ಕೊಡುಗೆಯನ್ನು ಈ ಪ್ರಶಸ್ತಿಯು ಗುರುತಿಸುತ್ತದೆ.

ಎರಡು ರಾಷ್ಟ್ರೀಯ ಪ್ರಶಸ್ತಿಗಳನ್ನು ಭಾರತೀಯ ಮೂಲದ ಘಟಕಗಳಿಗೆ ಮತ್ತು ಎರಡು ಅಂತರರಾಷ್ಟ್ರೀಯ ಪ್ರಶಸ್ತಿಗಳನ್ನು ಭಾರತೀಯ ಅಥವಾ ವಿದೇಶಿ ಮೂಲದ ಘಟಕಗಳಿಗೆ ನೀಡಲಾಗುತ್ತದೆ.

ಈ ವರ್ಷದ ಜೂನ್ 21 ರಂದು 9 ನೇ ಅಂತರರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ವಿಜೇತರನ್ನು ಘೋಷಿಸಲಾಗುತ್ತದೆ.

2023 ರ ಪ್ರಶಸ್ತಿಯ ಅರ್ಜಿ ಅಥವಾ ನಾಮನಿರ್ದೇಶನ ಪ್ರಕ್ರಿಯೆಯನ್ನು ಪ್ರಸ್ತುತ MyGov ನ ವೆಬ್‌ಸೈಟ್‌ನಲ್ಲಿ ಹೋಸ್ಟ್ ಮಾಡಲಾಗಿದೆ. ಈ ವರ್ಷದ ಪ್ರಶಸ್ತಿಗಳಿಗೆ ಅರ್ಜಿಗಳು ಅಥವಾ ನಾಮನಿರ್ದೇಶನ ಪ್ರಕ್ರಿಯೆಯು ಈ ತಿಂಗಳ 31 ರವರೆಗೆ ತೆರೆದಿರುತ್ತದೆ

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top