News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭಾರತದ ವಿಷಯದಲ್ಲಿ ರಾಹುಲ್ ಯುರೋಪ್, ಯುಎಸ್ ಹಸ್ತಕ್ಷೇಪ ಬಯಸುತ್ತಿದ್ದಾರೆ:‌ ಬಿಜೆಪಿ

ನವದೆಹಲಿ:  ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಲಂಡನ್‌ನಲ್ಲಿ ಹೇಳಿಕೆ ನೀಡಿರುವ ರಾಹುಲ್‌ ಗಾಂಧಿ ಅವರ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದ್ದು, ಭಾರತದ ವಿಷಯದಲ್ಲಿ ವಿದೇಶಿ ಹಸ್ತಕ್ಷೇಪವನ್ನು ಬಯಸುವ ಮೂಲಕ ರಾಹುಲ್ ದೇಶವನ್ನು ನಾಚಿಕೆಪಡಿಸುತ್ತಿದ್ದಾರೆ ಎಂದು ಆರೋಪಿಸಿದೆ.

“ಪ್ರಜಾಪ್ರಭುತ್ವಗಳ ರಕ್ಷಕರಾದ ಯುರೋಪ್ ಮತ್ತು ಅಮೇರಿಕಾ ಭಾರತದಲ್ಲಿ ಪ್ರಜಾಪ್ರಭುತ್ವದ ದೊಡ್ಡ ಅಪಾಯದಲ್ಲಿ ಇದೆ ಎಂಬುದರ ಬಗ್ಗೆ ಏಕೆ ಮರೆತಿದ್ದಾರೆ” ಎಂದು ಲಂಡನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಹುಲ್ ಗಾಂಧಿ ಪ್ರಶ್ನಿಸಿದ್ದರು.

ಇದನ್ನು ಖಂಡಿಸಿರುವ ಬಿಜೆಪಿ ವಕ್ತಾರ ರವಿಶಂಕರ್‌ ಪ್ರಸಾದ್‌ ಅವರು,”ರಾಹುಲ್ ಗಾಂಧಿಯವರು ತಮ್ಮ ಭಾಷಣಗಳಲ್ಲಿ ಭಾರತದ ಪ್ರಜಾಪ್ರಭುತ್ವ, ರಾಜಕೀಯ, ಸಂಸತ್ತು, ರಾಜಕೀಯ ವ್ಯವಸ್ಥೆ ಮತ್ತು ನ್ಯಾಯಾಂಗ ವ್ಯವಸ್ಥೆಯನ್ನು ನಾಚಿಕೆಪಡಿಸಲು ಪ್ರಯತ್ನಿಸಿದ್ದಾರೆ” ಎಂದಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ನಾಯಕಿ ಸೋನಿಯಾ ಗಾಂಧಿ ಅವರು ರಾಹುಲ್ ಹೇಳಿಕೆಗಳಿಗೆ ಸ್ಪಷ್ಟನೆ ನೀಡಬೇಕಿದೆ ಎಂದು ಅವರು ಒತ್ತಾಯಿಸಿದ್ದಾರೆ.

“ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಲು ಯುರೋಪ್ ಮತ್ತು ಯುಎಸ್ ಮಧ್ಯಪ್ರವೇಶಿಸಬೇಕು ಎಂದು ರಾಹುಲ್ ಗಾಂಧಿ ಬಯಸುತ್ತಾರೆಯೆ? ಅದು ಯಾರ ಸರ್ಕಾರವಾದರೂ ಸರಿ ನಮ್ಮ ಆಂತರಿಕ ವ್ಯವಹಾರಗಳಲ್ಲಿ ಯಾವುದೇ ಹಸ್ತಕ್ಷೇಪವನ್ನು ನಾವು ಬಲವಾಗಿ ವಿರೋಧಿಸುತ್ತೇವೆ. ಯಾವುದೇ ವಿದೇಶಿ ರಾಷ್ಟ್ರವು ಭಾರತದ ಆಂತರಿಕ ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸಬಾರದು” ಎಂದಿದ್ದಾರೆ.

” ಖರ್ಗೆ ಅವರೇ, ನೀವು ಕಾಂಗ್ರೆಸ್ಸಿನ ಚುನಾಯಿತ ಅಧ್ಯಕ್ಷರು ಎಂದು ನೀವು ಭಾವಿಸಿದರೆ, ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಲು ಅಮೆರಿಕಾ ಮತ್ತು ಯುರೋಪ್ ಭಾರತದಲ್ಲಿ ಮಧ್ಯಪ್ರವೇಶಿಸಬೇಕು ಎಂಬ ರಾಹುಲ್ ಗಾಂಧಿಯವರ ಬೇಜವಾಬ್ದಾರಿ ಮತ್ತು ನಾಚಿಕೆಗೇಡಿನ ಹೇಳಿಕೆಗಳನ್ನು ನೀವು ಬೆಂಬಲಿಸುತ್ತೀರಾ? ಅವರ ಹೇಳಿಕೆಗಳನ್ನು ಖಂಡಿಸಿ. ಸೋನಿಯಾ ಕೂಡ ರಾಹುಲ್‌ ಅವರ ಸಂಪೂರ್ಣ ಬೇಜವಾಬ್ದಾರಿ ಹೇಳಿಕೆಗಳ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಬಿಜೆಪಿ ನಿಮ್ಮನ್ನು ಒತ್ತಾಯಿಸುತ್ತದೆ” ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top