News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಉದ್ಯೋಗಕ್ಕಾಗಿ ಭೂಮಿ ಹಗರಣ: ಸಿಬಿಐನಿಂದ 2 ಗಂಟೆ ಲಾಲೂ ವಿಚಾರಣೆ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಇಂದು ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಅವರನ್ನು ಎರಡು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದೆ.

ಲಾಲು ಅವರನ್ನು ವಿಚಾರಣೆಗೊಳಪಡಿಸಿದ ಬಳಿಕ ಸಿಬಿಐ ತಂಡ ಅವರ ಪುತ್ರಿ ಮಿಸಾ ಭಾರ್ತಿ ಅವರ ನಿವಾಸಕ್ಕೆ ತೆರಳಿದೆ.

ಲಾಲು ವಿಚಾರಣೆಯನ್ನು ಸಂಪೂರ್ಣವಾಗಿ ವಿಡಿಯೋ ಗ್ರಾಫ್ ಮಾಡಲಾಗಿದೆ ಮತ್ತು ಅವರಿಗೆ ಅನಾರೋಗ್ಯ ಇದ್ದು ಸೋಂಕಿನ ಅಪಾಯವನ್ನು ಎದುರಿಸುತ್ತಿರುವ ಕಾರಣ ಸಿಬಿಐ ಅಧಿಕಾರಿಗಳು ಎಲ್ಲಾ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ವಿಚಾರಣೆ ವೇಳೆ ಲಾಲು ಯಾದವ್ ಪುತ್ರಿ ಮಿಸಾ ಭಾರತಿ ಹಾಜರಿದ್ದರು. ಸಿಬಿಐ ಪ್ರಕಾರ, ಲಾಲು ಯಾದವ್ ರೈಲ್ವೆ ಸಚಿವರಾಗಿದ್ದಾಗ ಯಾದವ್ ಕುಟುಂಬ ಮತ್ತು ಸಹಚರರಿಗೆ ಭೂಮಿಗಳನ್ನು ಉಡುಗೊರೆಯಾಗಿ ಅಥವಾ ಅಗ್ಗದ ದರದಲ್ಲಿ ಮಾರಾಟ ಮಾಡಿದ್ದಕ್ಕೆ ಪ್ರತಿಯಾಗಿ ಜನರಿಗೆ ರೈಲ್ವೆಯಲ್ಲಿ ಉದ್ಯೋಗ ನೀಡಲಾಗಿತ್ತು ಎಂದು ಆರೋಪಿಸಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top