ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಶತಾಯ ಗತಾಯ ಸೋಲಿಸಲೇಬೇಕೆಂಬ ಗುರಿಯೊಂದಿಗೆ ಕಾಂಗ್ರೆಸ್, ಜೆಡಿಯು, ಆರ್ಜೆಡಿ ಪಕ್ಷಗಳು ಮಹಾಮೈತ್ರಿಯನ್ನೇನೋ ಮಾಡಿಕೊಂಡಿವೆ. ಆದರೆ ಈ ಮೈತ್ರಿಯೊಳಗೆ ಎಲ್ಲವೂ ಸರಿಯಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
ಶನಿವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಬಿಹಾರದ ಚಂಪಾರನ್ ಜಿಲ್ಲೆಯ ರಾಮ್ ನಗರದಲ್ಲಿ ತಮ್ಮ ಮೊದಲ ಚುನಾವಣಾ ಸಮಾವೇಶವನ್ನು ಹಮ್ಮಿಕೊಂಡಿದ್ದಾರೆ. ಆದರೆ ಈ ಸಮಾವೇಶದಲ್ಲಿ ಪಾಲ್ಗೊಳ್ಳಲು ಜೆಡಿಯು ಮುಖಂಡ ಹಾಗೂ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹಿಂದೇಟು ಹಾಕಿದ್ದಾರೆ.
ಅಷ್ಟೇ ಅಲ್ಲದೇ ಆರ್ಜೆಡಿ ಮುಖಂಡ ಲಾಲೂ ಪ್ರಸಾದ್ ಯಾದವ್ ಅವರೂ ತಮ್ಮ ಬದಲು ತಮ್ಮ ಮಗನನ್ನು ಈ ಸಮಾವೇಶಕ್ಕೆ ಕಳೂಹಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಸೋಲಿನ ಸರದಾರ ಎನಿಸಿರುವ ರಾಹುಲ್ ಅವರೊಂದಿಗೆ ವೇದಿಕೆ ಹಂಚಿಕೊಂಡರೆ ತಮ್ಮ ಪಕ್ಷದ ಮೇಲೆ ಕೆಟ್ಟ ಪರಿಣಾಮ ಬೀರಬಹುದು ಎಂಬ ಆತಂಕ ಈ ಮುಖಂಡರಿಗಿದೆ ಎಂದು ವಿಶ್ಲೇಷಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.